ಮಂಗಳವಾರ, ಏಪ್ರಿಲ್ 20, 2021
26 °C

ಲಿಂಬಾವಳಿಗೆ ಪ.ಬಂಗಾಳ ಚುನಾವಣಾ ಜವಾಬ್ದಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಉದ್ದೇಶದಿಂದ ಹಲವು ನಾಯಕರನ್ನು ತೊಡಗಿಸಿಕೊಳ್ಳುತ್ತಿರುವ ಬಿಜೆಪಿ ವರಿಷ್ಠರು, ರಾಜ್ಯದ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರನ್ನೂ ಕರೆಯಿಸಿಕೊಂಡಿದೆ.

ಕಲಬುರ್ಗಿ ಪ್ರವಾಸದಲ್ಲಿರುವ ಸಚಿವ ಅರವಿಂದ ಲಿಂಬಾವಳಿ ಅವರಿಗೆ ದೆಹಲಿಯಿಂದ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಅವರ ತುರ್ತು ಕರೆ ಬಂದ ಕಾರಣ ತಮ್ಮ ಪ್ರವಾಸ ಮೊಟಕುಗೊಳಿಸಿ ದೆಹಲಿಗೆ ತೆರಳಿದರು.

ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರೂ ಈಗಾಗಲೇ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ತೆಲಂಗಾಣ ಸೇರಿ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿ ಅನುಭವ ಹೊಂದಿರುವ ಅರವಿಂದ್‌ ಅವರನ್ನು ಪಶ್ಚಿಮಬಂಗಾಳದಲ್ಲಿ ತೊಡಗಿಸಿಕೊಳ್ಳುವಂತೆ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು