ಮಂಗಳವಾರ, ಡಿಸೆಂಬರ್ 1, 2020
24 °C

ಪಶ್ಚಿಮ ಕ್ಷೇತ್ರ: ಸಂಕನೂರ ‍ಪುನರಾಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡ: ವಿಧಾನ ಪರಿಷತ್‌ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಎಸ್.ವಿ.ಸಂಕನೂರ ಅವರು 23,857 ಮೊದಲ ಪ್ರಾಶಸ್ತ್ಯದ ಮತ ಪಡೆಯುವ ಮೂಲಕ ಪುನರಾಯ್ಕೆಯಾದರು.

ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಆರ್.ಎಂ.ಕುಬೇರಪ್ಪ 12,448 ಮತ ಪಡೆದರು. ಜೆಡಿಎಸ್ ಹಾಗೂ ಇತರ ಸಂಘಟನೆಗಳ ಬೆಂಬಲ ಪಡೆದಿದ್ದ ಪಕ್ಷೇ ತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ 6,188 ಮತ ಪಡೆಯಲು ಮಾತ್ರ ಸಾಧ್ಯವಾಯಿತು. 8,772 ಮತ ಗಳು ತಿರಸ್ಕೃತಗೊಂಡವು. ಸಂಕನೂರ ಮೊದಲ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡರು. ಸಂಜೆ ಚುನಾವಣಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಸಂಕನೂರ ಅವರ ಗೆಲುವನ್ನು ಘೋಷಿಸಿದರು. 11 ಅಭ್ಯರ್ಥಿಗಳು ಕಣದಲ್ಲಿದ್ದರು. ಒಟ್ಟು 52,068 ಮತಗಳು ಚಲಾವಣೆಯಾಗಿದ್ದವು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು