ಶುಕ್ರವಾರ, ಮೇ 14, 2021
25 °C

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಏನಾಯಿತು?: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂಧನೂರು (ರಾಯಚೂರು ಜಿಲ್ಲೆ): ‘ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಜೊತೆಗೂಡಿ ಕಟ್ಟಿದ ಸಂಗೊಳ್ಳಿರಾಯಣ್ಣ ಬ್ರಿಗೇಡ್ ಏನಾಯಿತು? ನಾನು ಬೂಟಾಟಿಕೆಗಾಗಿ ಹೋರಾಟ ಮತ್ತು ರಾಜಕಾರಣ ಮಾಡಲ್ಲ. ನನ್ನ ಜೀವ ಇರುವವರಿಗೂ ಮೀಸಲಾತಿ ಪರವಾಗಿಯೇ ಹೋರಾಟ ಮಾಡುವೆ’ ಎಂದು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ತಿಳಿಸಿದರು.

‘ಸುಳ್ಳು ಹೇಳುವ ಮನುಷ್ಯ ನಾನಲ್ಲ. ಈ ಬಗ್ಗೆ ಯಡಿಯೂರಪ್ಪ, ಈಶ್ವರಪ್ಪ ಚರ್ಚೆಗೆ ಬರಲಿ. ವಿರೂಪಾಕ್ಷಪ್ಪ ಬಂದರೂ ಪರವಾಗಿಲ್ಲ. ಸತ್ಯ ಹೇಳುವುದಕ್ಕೆ ಎಂದಿಗೂ ಹೆದರಬಾರದು’ ಎಂದು ಅವರು ತಿಳಿಸಿದರು.

‘ಸ್ವಾತಂತ್ರ್ಯ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಹಿತರಕ್ಷಣೆಯೊಂದಿಗೆ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿದು ಮೀಸಲಾತಿ ಕಾಪಾಡುತ್ತಿದೆ. ಆದರೆ, ಮೀಸಲಾತಿ ವಿರೋಧಿಯಾದ ಬಿಜೆಪಿ ಸಾಮಾಜಿಕ ನ್ಯಾಯದ ಪರವಾಗಿ ಇರುವ ಒಂದೇ ಒಂದು ನಿದರ್ಶನ ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುವೆ’ ಎಂದು ಅವರು ಸವಾಲು ಹಾಕಿದರು.

‘ಬಿಜೆಪಿ ಅಭ್ಯರ್ಥಿ ಸೋಲಿನ ಭಯದಿಂದ ಆ ಪಕ್ಷದವರು ಮಸ್ಕಿ ವಿಧಾನಸಭಾ ಕ್ಷೇತ್ರದ ತುಂಬಾ ಮನೆ ಮನೆಗೆ ತೆರಳಿ ಜನರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ‘ ಎಂದು ಆರೋಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು