ಮುಖ್ಯಮಂತ್ರಿ ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ಬದ್ಧ: ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: 'ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಮುಖ್ಯಮಂತ್ರಿ ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ಬದ್ಧರಾಗಿರುತ್ತೇವೆ' ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಸೋಮವಾರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಹೈಕಮಾಂಡ್ ಜತೆ ಮುಖ್ಯಮಂತ್ರಿ ಸಂಪರ್ಕದಲ್ಲಿದ್ದಾರೆ. ಎಲ್ಲ ಮಾಹಿತಿಯನ್ನು ಮುಖ್ಯಮಂತ್ರಿಯವರೇ ತಿಳಿಸುತ್ತಾರೆ' ಎಂದರು.
ಆಫ್ ಲೈನ್ ತರಗತಿ: 'ಪದವಿ ಸ್ನಾತಕೋತ್ತರ ಕೋರ್ಸ್ ಗಳಿಗೆ ಆಫ್ ಲೈನ್ ತರಗತಿ ಜ. 15ರಿಂದ ಆರಂಭವಾಗಲಿದೆ. ಮೊದಲ ಮತ್ತು ಎರಡನೇ ವರ್ಷದ ತರಗತಿಗಳು ಆರಂಭವಾಗಲಿದೆ' ಎಂದರು.
'ಎಂಜಿನಿಯರಿಂಗ್ ಮೂರನೇ ವರ್ಷದ ಆಫ್ ಲೈನ್ ತರಗತಿಯೂ ಜನವರಿ 15 ರಿಂದ ಆರಂಭವಾಗಲಿದೆ. ಜೊತೆಗೆ ಡಿಪ್ಲೊಮಾ ತರಗತಿಯೂ ಆರಂಭವಾಗಲಿದೆ' ಎಂದೂ ಅವರು ಹೇಳಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.