ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡ್ಡಾಯ ವರ್ಗಾವಣೆಯಾದವರಿಗೆ ಆದ್ಯತೆ

ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ
Last Updated 27 ನವೆಂಬರ್ 2020, 19:05 IST
ಅಕ್ಷರ ಗಾತ್ರ

ಬೆಂಗಳೂರು: ‘2017-18ನೇ ಸಾಲಿನಲ್ಲಿ ಕಡ್ಡಾಯ ವರ್ಗಾವಣೆಗೆ ಒಳಗಾದ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಪ್ರಸಕ್ತ ಸಾಲಿನ ವರ್ಗಾವಣೆಯಲ್ಲಿ ಎಲ್ಲ ವಲಯಗಳಲ್ಲಿ ಪ್ರಥಮ ಆದ್ಯತೆ ನೀಡಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಪಿಯು ಇಲಾಖೆಯ ನಿರ್ದೇಶಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಸೂಚಿಸಿದ್ದಾರೆ.

ಕಡ್ಡಾಯ ವರ್ಗಾವಣೆಯಾದ ಉಪನ್ಯಾಸಕರಿಗೆ ಅವಕಾಶ ಕಲ್ಪಿಸಿದ ಬಳಿಕ ಉಳಿದ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಬೇಕು ಎಂದೂ ಸಚಿವರು ನಿರ್ದೇಶನ ನೀಡಿದ್ದಾರೆ.

‘2017–18ನೇ ಸಾಲಿನಲ್ಲಿ ಹೆಚ್ಚುವರಿ ಉಪನ್ಯಾಸಕರ ವರ್ಗಾವಣೆಯಡಿಯಲ್ಲಿ ವರ್ಗಾವಣೆಗೊಂಡಿದ್ದ ಉಪನ್ಯಾಸಕರಿಗೆ ಎರಡನೇ ಆದ್ಯತೆಯಲ್ಲಿ ಅವಕಾಶ ಕಲ್ಪಿಸಬೇಕು’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT