ಸೋಮವಾರ, ಮಾರ್ಚ್ 20, 2023
24 °C

‘ಬಿಬಿಸಿ ಸಾಕ್ಷ್ಯಚಿತ್ರ ಈಗ ಹೊರಬಂದಿದ್ದೇಕೆ?’ ಬೈರಪ್ಪ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು:  ‘2002ರ ಗುಜರಾತ್‌ ಗಲಭೆಯಲ್ಲಿ ನರೇಂದ್ರ ಮೋದಿ ಪಾತ್ರವಿತ್ತು’ ಎಂದು ಆರೋಪಿಸಿ ಬಿಬಿಸಿ ಹೊರತಂದಿರುವ ಸಾಕ್ಷ್ಯಚಿತ್ರದ ಬಗ್ಗೆ ಸಾಹಿತಿ ಎಸ್‌.ಎಲ್‌ ಬೈರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪದ್ಮಭೂಷಣ ಪುರಸ್ಕಾರ ದೊರೆತಿದ್ದಕ್ಕೆ, ಇಲ್ಲಿನ ಕುವೆಂಪುನಗರದ ತಮ್ಮ ನಿವಾಸದಲ್ಲಿ ಜಿಲ್ಲಾಡಳಿತದಿಂದ ಗುರುವಾರ ಅಭಿನಂದನೆ ಸ್ವೀಕರಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.

‘ಈಗ ಅದು ಹೊರಬಂದಿದ್ದೇಕೆ? ಜಿ–20 ಶೃಂಗಸಭೆಗೆ ಉತ್ತಮ ಅರ್ಥಶಾಸ್ತ್ರಜ್ಞರನ್ನು ಆಯ್ಕೆ ಮಾಡಿದ್ದನ್ನು ತಡೆಯಲಾಗದೇ ಇಂಥದ್ದೆಲ್ಲ ಶುರು ಮಾಡಿಕೊಂಡಿದ್ದಾರೆ. ಹಳೆಯದ್ದನ್ನೆಲ್ಲಾ ಈಗ ತೆಗೆದಿದ್ದಾರೆ’ ಎಂದು ಭೈರಪ್ಪ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು