ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ₹2 ಲಕ್ಷ ಯಾಕೆ ಕಟ್ಟಬೇಕು: ಎಸ್ಎಸ್ಎಂ

ದಾವಣಗೆರೆ: ‘ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಅರ್ಜಿಯ ಜೊತೆಗೆ ₹ 2 ಲಕ್ಷವನ್ನು ಯಾಕೆ ಕಟ್ಟಬೇಕು?’ ಎಂದು ಪ್ರಶ್ನಿಸಿರುವ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ‘ಪ್ರಾಮಾಣಿಕರಾಗಿರುವ ನಾವು ₹ 2 ಲಕ್ಷ ಕಟ್ಟಬಾರದು’ ಎಂದು ಪ್ರತಿಪಾದಿಸಿದರು.
ನಗರದಲ್ಲಿ ಪಕ್ಷದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ‘ಭಾರತ್ ಜೋಡೊ–ಸಂವಿಧಾನ ಬಚಾವೋ’ ಪಾದಯಾತ್ರೆಗೆ ಚಾಲನೆ ನೀಡಿ, ಸುದ್ದಿ ಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಪಕ್ಷದ ಟಿಕೆಟ್ ಕೋರಿ ಅರ್ಜಿ ಸಲ್ಲಿ ಸುತ್ತೇನೆ. ಪ್ರಾಮಾಣಿಕವಾಗಿರುವ ನಾವು ಯಾಕೆ ₹ 2 ಲಕ್ಷ ಯಾಕೆ ಕಟ್ಟಬೇಕು ಎಂದು ಕೇಳುತ್ತಿದ್ದೇನೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.