ಮಂಗಳವಾರ, ಸೆಪ್ಟೆಂಬರ್ 28, 2021
21 °C

‘ವೈಲ್ಡ್ ಕರ್ನಾಟಕ’ ಸಾಕ್ಷ್ಯಚಿತ್ರಕ್ಕೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ವೈಲ್ಡ್ ಕರ್ನಾಟಕ’ ಅಥವಾ ‘ಇಂಡಿಯಾಸ್ ವೈಲ್ಡ್ ಕರ್ನಾಟಕ’ ಎಂಬ ಸಾಕ್ಷ್ಯಚಿತ್ರ ಪ್ರಸಾರಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

‘ಪ್ರತಿವಾದಿಗಳಾದ ಶರತ್ ಚಂಪತಿ ಮತ್ತು ಇತರ ನಾಲ್ವರು ಅಥವಾ ಹಕ್ಕು ಪ್ರತಿಪಾದಿಸುವ ಯಾರೊಬ್ಬರೂ ಈ ಸಾಕ್ಷ್ಯಚಿತ್ರವನ್ನು ಪ್ರಕಟಿಸಬಾರದು. ಈ ಚಿತ್ರದ ಮರು ನಿರ್ಮಾಣ, ಪ್ರಸಾರ ಮತ್ತು ಮಾರಾಟ ಸೇರಿ ಎಲ್ಲಾ ವ್ಯವಹಾರಕ್ಕೆ ತಡೆ ನೀಡಲಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಹೇಳಿದೆ. ವಿಚಾರಣೆಯನ್ನು ಆ.3ಕ್ಕೆ ಮುಂದೂಡಿದೆ.

ಈ ಸಂಬಂಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ರವೀಂದ್ರ ರೆಡ್ಕರ್ ಮತ್ತು ಆರ್‌.ಕೆ. ಉಲ್ಲಾಸ್ ಕುಮಾರ್, ‘ಈ ಚಿತ್ರವನ್ನು ಜಗತ್ತಿನಾದ್ಯಂತ ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ. ಚಿತ್ರ ನಿರ್ಮಾಣ ವಿಷಯದಲ್ಲಿ ಖಾಸಗಿ ವ್ಯಕ್ತಿಗಳೊಂದಿಗೆ ಅರಣ್ಯ ಇಲಾಖೆ ಮಾಡಿಕೊಂಡಿರುವ ಒಡಂಬಡಿಕೆಯು ಕೆಟಿಪಿಪಿ(ಕರ್ನಾಟಕ ಪಾರದರ್ಶಕ) ಕಾಯ್ದೆ ಪ್ರಕಾರ ಇಲ್ಲ. ಹೀಗಾಗಿ, ಸಾಕ್ಷ್ಯಚಿತ್ರದ ಪ್ರಸಾರಕ್ಕೆ ತಡೆ ನೀಡಬೇಕು’ ಎಂದು ಕೋರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು