ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಪ್ರಥಮ ವನ್ಯಜೀವಿ ವಿಧಿ ವಿಜ್ಞಾನಗಳ ಪ್ರಯೋಗಾಲಯ ಬೆಂಗಳೂರಿನಲ್ಲಿ

Last Updated 5 ಜನವರಿ 2023, 4:26 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಪ್ರಥಮ ವನ್ಯಜೀವಿ ವಿಧಿ ವಿಜ್ಞಾನಗಳ ಪ್ರಯೋಗಾಲಯ ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿದ್ದು, ಇದಕ್ಕೆ ರಾಜ್ಯ ಸರ್ಕಾರ ₹2.7 ಕೋಟಿ ಅನುದಾನ ನೀಡಲು ಒಪ್ಪಿದೆ. ಮಾರ್ಚ್‌ನಿಂದ ಈ ಪ್ರಯೋಗಾಲಯ ಕಾರ್ಯಾರಂಭ ಮಾಡಲಿದೆ.

ಕಳೆದ ಒಂದು ದಶಕದಿಂದ ಪ್ರಯೋಗಾಲಯ ಸ್ಥಾಪನೆಯ ಪ್ರಸ್ತಾವನೆ ಚರ್ಚೆಯಲ್ಲಿದ್ದು, ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಒಪ್ಪಿಗೆ ನೀಡಿದೆ. ವನ್ಯಜೀವಿಗಳ ಮೇಲಿನ ಅಪರಾಧಗಳ ಬಗ್ಗೆ ತನಿಖೆ ನಡೆಸಲು ಈ ಪ್ರಯೋಗಾಲಯ ನೆರವಾಗಲಿದೆ. ಇದರಿಂದ ಅಪರಾಧಿಗಳಿಗೆ ಶಿಕ್ಷೆ ಕೊಡಿಸಲು ನೆರವಾಗಲಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಈಗ ಸ್ಯಾಂಪಲ್‌ಗಳನ್ನು ಡೆಹರಾಡೂನ್ ಅಥವಾ ಹೈದರಾಬಾದ್‌ಗಳಲ್ಲಿರುವ ಪ್ರಯೋಗಾಲಯಗಳಿಗೆ ಕಳುಹಿಸಲಾಗುತ್ತಿದೆ. ಇದರಿಂದ ಬಹಳಷ್ಟು ಅಪರಾಧಗಳ ಪ್ರಕರಣಗಳಲ್ಲಿ ತನಿಖೆ ತಡವಾಗುತ್ತಿದೆ. ಮುಂದೆ ಈ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT