ಶುಕ್ರವಾರ, ಆಗಸ್ಟ್ 12, 2022
22 °C

ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಶನಿವಾರ ಸಿಎಂ ಯಡಿಯೂರಪ್ಪ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಳೆ ಮತ್ತು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಶನಿವಾರ ವಿಡಿಯೋ ಸಂವಾದ ನಡೆಸಿ, ಅನಾಹುತ ತಡೆಗಟ್ಟಲು ಪೂರ್ವಭಾವಿ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂಗಾರು ಮಳೆಯಿಂದ ಪ್ರವಾಹ ಉಂಟಾಗಿರುವ ಜಿಲ್ಲೆಗಳ ಅಧಿಕಾರಿಗಳ ಜತೆ ಈಗಾಗಲೇ ಚರ್ಚೆ ಮಾಡಿದ್ದೇನೆ. ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸ್ಥಿತಿಗತಿಯ ಬಗ್ಗೆ ನಾಳೆಯ ಸಭೆಯಲ್ಲಿ ಚರ್ಚಿಸುತ್ತೇನೆ ಎಂದರು.

ಮಹಾರಾಷ್ಟ್ರದ ನೀರಾವರಿ ಸಚಿವರು ನಾಳೆ(ಶನಿವಾರ) ರಾಜ್ಯಕ್ಕೆ ಬರಲಿದ್ದು, ಪ್ರವಾಹ ಸ್ಥಿತಿಗತಿಯನ್ನು ತಡೆಗಟ್ಟುವ ಬಗ್ಗೆ ಅವರ ಜತೆ ಚರ್ಚೆ ನಡೆಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು