ಬೆಂಗಳೂರು: ‘ದೂರದರ್ಶನ ಅಥವಾ ಮೊಬೈಲ್ ಇಲ್ಲದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಶಿಕ್ಷಣ ಒದಗಿಸಲು ರಾಜ್ಯದಲ್ಲಿರುವ 5,766 ಗ್ರಾಮ ಪಂಚಾಯಿತಿಯ ಗ್ರಂಥಾಲಯಗಳಲ್ಲಿ ಡಿವೈಸರ್ ಅಳವಡಿಸುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ಮುಖ್ಯಮಂತ್ರಿಯ ಸಲಹೆಗಾರರಾದ ಪ್ರಶಾಂತ್ ಪ್ರಕಾಶ್ ಮತ್ತು ಸರ್ಕಾರದ ಶೈಕ್ಷಣಿಕ ಸಲಹೆಗಾರರಾದ ಪ್ರೊ. ದೊರೆಸ್ವಾಮಿ ಜೊತೆ ತಮ್ಮ ಕಚೇರಿಯಲ್ಲಿ ಸೋಮವಾರ ಚರ್ಚಿಸಿದ ಬಳಿಕ ಮಾತನಾಡಿದ ಅವರು, ‘ಕೋವಿಡ್ ಕಾರಣದಿಂದ ಶಾಲೆಗಳು ಆರಂಭ ಆಗದೇ ಇರುವುದರಿಂದ ಡಿಜಿಟಲ್ ಶಿಕ್ಷಣ ಇಲ್ಲವೇ ಆನ್‌ಲೈನ್‌ನಂಥ ಪರ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳನ್ನು ತಲುಪಬೇಕಾಗಿದೆ. ಈ ಸೌಲಭ್ಯ ವಂಚಿತ ಮಕ್ಕಳಿಗೆ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಶಿಕ್ಷಣ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.

ಇದನ್ನೂ ಓದಿ:‘ವಿಸ್ಟಾಡೋಮ್’ ಬೋಗಿಗಳಲ್ಲಿ ಪ್ರಯಾಣ: ಪ್ರಕೃತಿಯ ರಮಣೀಯ ನೋಟದ ಪುಳಕ!

‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಗ್ರಾಮೀಣ ಮಕ್ಕಳ ಶಿಕ್ಷಣ ಮುಂದುವರಿಕೆ ಮತ್ತು ಕಲಿಕಾ ನಿರಂತರತೆಗೆ ಅನುಕೂಲವಾಗುವಂಥ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಮುಂದಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಶಾಲೆಗಳಲ್ಲಿನ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಉತ್ತಮಗೊಳಿಸುವುದು ಸೇರಿದಂತೆ ಪರಿಣಾಮಕಾರಿ ಶಿಕ್ಷಣ ವ್ಯವಸ್ಥೆ ರೂಪಿಸುವ ಕುರಿತಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾವಧಿ ಮುಗಿದ ಕೂಡಲೇ ಆರ್‌ಡಿಪಿಆರ್ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಶಿಕ್ಷಣ ಇಲಾಖೆಯ ಕಾರ್ಯಪಡೆ ಈ ಎಲ್ಲ ಅಂಶಗಳನ್ನು ಅವಲೋಕಿಸಿ ಪ್ರಾಯೋಗಿಕ ಕ್ರಮಗಳ ಕುರಿತಂತೆ ಕ್ರಿಯಾಯೋಜನೆ ರೂಪಿಸಲಿದೆ’ ಎಂದರು.

ಸಮಸ್ಯೆ ಪರಿಹಾರಕ್ಕೆ ಕ್ರಮ:
ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆ ಪರಿಹರಿಸುವ ಕುರಿತು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಜೊತೆಗೂ ಸುರೇಶ್ ಕುಮಾರ್ ಅವರು ಸೋಮವಾರ ಚರ್ಚೆ ನಡೆಸಿದರು.

ಮಾಹಿತಿ ತಂತ್ರಜ್ಞಾನ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ್ ಮತ್ತು ತಮ್ಮ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್-ವರ್ಕ್ ಪೂರೈಕೆದಾರ ಕಂಪನಿಗಳ ಜೊತೆ ಮಾಹಿತಿ ತಂತ್ರಜ್ಞಾನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಚರ್ಚಿಸಿದ್ದು, ಅವರೆಲ್ಲಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಸಚಿವರ ಗಮನಕ್ಕೆ ತಂದಿದ್ದಾರೆ.

‘ಪ್ರಸ್ತುತ ಮಳೆಗಾಲ ಆಗಿರುವುದರಿಂದ ಮಲೆನಾಡು ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್-ವರ್ಕ್ ಸಮಸ್ಯೆಯಿಂದಾಗಿ ಮಕ್ಕಳ ಪರ್ಯಾಯ ಬೋಧನಾ ಕ್ರಮಗಳಾದ ಆನ್‌ಲೈನ್ ಬೋಧನಾ ಕ್ರಮ ಇಲ್ಲವೇ ದೂರದರ್ಶನ ಚಂದನಾ ಪಾಠಗಳಿಗೆ ತೊಂದರೆ ಆಗಿದೆ. ಈ ಕುರಿತು ತ್ವರಿತವಾಗಿ ಗಮನ ಹರಿಸುವುದರ ಅಗತ್ಯವಿದ್ದು, ಮಕ್ಕಳ ಬೋಧನಾ ವಿಧಾನದ ಗುಣಮಟ್ಟ ಕಾಪಾಡಬೇಕಾಗಿದೆ’ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ಕೋವಿಡ್ ಕಾರಣ ಶಾಲೆಗಳ ಆರಂಭ ವಿಳಂಬವಾಗುತ್ತಿರುವ ಕಾರಣ ಪ್ರಸ್ತುತ ಪರ್ಯಾಯ ಬೋಧನಾ ಕ್ರಮಗಳನ್ನೇ ಅವಲಂಬಿಸಬೇಕಾಗಿದೆ. ಎಲ್ಲ ಮಕ್ಕಳಿಗೂ ಉತ್ತಮ ಗುಣಮಟ್ಟದ ಬೋಧನೆ ದೊರಕಿಸಿಕೊಡುವ ನಿಟ್ಟಿನಲ್ಲಿ ನಾವು ಆನ್‌ಲೈನ್ ವ್ಯವಸ್ಥೆಯನ್ನೇ ನೆಚ್ಚಿಕೊಂಡಿರುವಂಥ ಸಂದರ್ಭದಲ್ಲಿ ಮೊಬೈಲ್ ನೆಟ್-ವರ್ಕ್ ಬಲಪಡಿಸುವುದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೂ ಎಲ್ಲರಂತೆ ಶಿಕ್ಷಣ ದೊರೆತು ಕಲಿಕಾ ನಿರಂತರತೆಯಲ್ಲಿ ಅವರನ್ನು ತೊಡಗಿಸಬೇಕಾಗಿದೆ’ ಎಂದು ಸಚಿವರು ತಿಳಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಕೂಡಾ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು, ಯುದ್ಧೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.