ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಲಾಖೆ–ಅಕಾಡೆಮಿ ನಡುವೆ ಸಮನ್ವಯ: ಸುನಿಲ್ ಕುಮಾರ್

Last Updated 19 ಆಗಸ್ಟ್ 2021, 21:45 IST
ಅಕ್ಷರ ಗಾತ್ರ

ಬೆಂಗಳೂರು: ‘ಇಲಾಖೆಯ ವ್ಯಾಪ್ತಿಯಲ್ಲಿರುವ ಪ್ರಾಧಿಕಾರಗಳು, ಅಕಾಡೆಮಿಗಳು ಮತ್ತು ರಂಗಾಯಣಗಳು ಹಾಗೂ ಇಲಾಖೆಯ ನಡುವೆ ಸಮನ್ವಯ ಸಾಧಿಸಲು ರಾಜ್ಯದ ನಾಲ್ಕೂ ಉಪವಿಭಾಗಗಳಿಗೆ ಜಂಟಿ ನಿರ್ದೇಶಕರನ್ನು ನೇಮಿಸಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಿಳಿಸಿದರು.

ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಅಧ್ಯಕ್ಷರು ಹಾಗೂ ರಂಗಾಯಣ ನಿರ್ದೇಶಕರ ಜೊತೆ ವಿಕಾಸಸೌಧದಲ್ಲಿ ಗುರುವಾರ ಸಭೆ ನಡೆಸಿದ ಅವರು, ‘ಆ ಮೂಲಕ, ಅಧಿಕಾರ ವಿಕೇಂದ್ರೀಕರಣಗೊಳಿಸಿ, ಆಡಳಿತ ಸುಧಾರಣೆಗೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.

‘ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಬಲ
ವರ್ಧನೆಗೆ ಎಲ್ಲ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಗಾಗಿ ಶಿಕ್ಷಣ ಇಲಾಖೆ ಮತ್ತು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಜೊತೆಗೂಡಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ರೂಪಿಸಿ, ಅಭಿಯಾನ ಹಮ್ಮಿಕೊಳ್ಳುವ ಚಿಂತನೆಯಿದೆ. ಅದಕ್ಕೆ ಪೂರಕವಾಗಿ ಎಲ್ಲ ಅಕಾಡೆಮಿ ಮತ್ತು ಪ್ರಾಧಿಕಾರಗಳು ಕಾರ್ಯಕ್ರಮ ರೂಪಿಸಬೇಕು. ಅಲ್ಲದೆ, ಮುಂದಿನ 100 ದಿನಗಳಿಗೆ ಕಾರ್ಯಯೋಜನೆ ಸಿದ್ಧಪಡಿಸಬೇಕು’ ಎಂದೂ ಸೂಚಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌. ನಾಗಾಭರಣ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ನಂದೀಶ್ ಹಂಚೆ ಸೇರಿದಂತೆ ಎಲ್ಲ ಪ್ರಾಧಿಕಾರಗಳ ಮತ್ತು ಅಕಾಡೆಮಿಗಳ ಅಧ್ಯಕ್ಷರು, ಇಲಾಖೆಯ ಕಾರ್ಯದರ್ಶಿ ರವಿಶಂಕರ್, ನಿರ್ದೇಶಕ ಎಸ್‌. ರಂಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT