ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಕಲಬುರ್ಗಿ ಪಾಲಿಕೆ: ಬಿಜೆಪಿ ಜೊತೆ ಮೈತ್ರಿ ಕುರಿತು ತೀರ್ಮಾನಿಸಿಲ್ಲ, ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಬೆಂಬಲ ನೀಡುವಂತೆ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ. ಆದರೆ, ತಮ್ಮ ಪಕ್ಷ ಮೈತ್ರಿ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಸೋಮವಾರ ರಾತ್ರಿ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಗೂ ಮೊದಲು ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಿಜೆಪಿಯವರು ಈಗ ಸಹಕಾರ ಕೇಳುತ್ತಾರೆ. ನಂತರ ನಮ್ಮ ವಿರುದ್ಧವೇ ಮಾತನಾಡುತ್ತಾರೆ. ಅವಶ್ಯಕತೆ ಇದ್ದಾಗ ನಮ್ಮನ್ನು ಬಳಸಿಕೊಂಡು ನಂತರ ದೂರುವುದು ಬಿಜೆಪಿಯವರ ಲಕ್ಷಣ. ಈ ಕಾರಣದಿಂದಾಗಿ ಮೈತ್ರಿ ಕುರಿತು ಯಾವುದೇ ನಿರ್ಧಾರ ಮಾಡಿಲ್ಲ’ ಎಂದರು.

ಜಾತ್ಯತೀತ ಪಕ್ಷಗಳು ಒಂದಾಗಬೇಕು ಎಂದು ಕೆಲವರು ಸಲಹೆ ನೀಡುತ್ತಿದ್ದಾರೆ. ಪಕ್ಷದ ಶಾಸಕರ ಜತೆ ಚರ್ಚಿಸಿದ ಬಳಿಕ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.

ಕಲಬುರ್ಗಿ ಮಹಾನಗರ ಪಾಲಿಕೆಯ ನಾಲ್ವರು ಜೆಡಿಎಸ್‌ ಸದಸ್ಯರೂ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗಿದ್ದರು. ಪಕ್ಷದ ಬಹುತೇಕ ಶಾಸಕರು ಸಭೆಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು