ಈಶ್ವರಪ್ಪ ಬಂಧನದವರೆಗೂ ಹೋರಾಟ ನಿಲ್ಲದು: ಕಾಂಗ್ರೆಸ್

ಬೆಂಗಳೂರು: ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೆ, ಸುದ್ದಿಗಾರರ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಈಶ್ವರಪ್ಪ ಅವರನ್ನು ಬಂಧಿಸುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ’ ಎಂದು ಘೋಷಿಸಿದ್ದಾರೆ.
‘ನಮ್ಮ ಹೋರಾಟ ರಾಜೀನಾಮೆ ಕೇಳುವುದಕ್ಕಷ್ಟೆ ಸೀಮಿತವಾಗಿಲ್ಲ. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಈಶ್ವರಪ್ಪ ಅವರನ್ನು ಬಂಧಿಸುವವರೆಗೆ ಮುಂದುವರಿಯಲಿದೆ’ ಎಂದರು.
ಸಂತೋಷ್ ಪಾಟೀಲ ಆತ್ಮಹತ್ಯೆಗೆ ಸಚಿವ ಕೆ.ಎಸ್. ಈಶ್ವರಪ್ಪ ನೇರ ಕಾರಣ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕರು, ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ದಾರಿ ಮಧ್ಯೆ ತಡೆದು ಪೊಲೀಸರು ವಶಕ್ಕೆ ಪಡೆದಿದ್ದರು. ಆ ಬಳಿಕ, ಕಾಂಗ್ರೆಸ್ ನಾಯಕರು ವಿಧಾನಸೌಧದ ಮೆಟ್ಟಿಲುಗಳಲ್ಲಿ ಕುಳಿತು 24 ಗಂಟೆ ಅವಧಿಯ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.