ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿ, ಸಾರ್ವಜನಿಕರ ಪ್ರಾಣ ಮತ್ತು ಆಸ್ತಿ ರಕ್ಷಿಸಬೇಕಾದ ಹೊಣೆಗಾರಿಕೆ ಹೊಂದಿರುವ ಪೊಲೀಸರೇ ಅಪರಾಧ ಎಸಗುವುದನ್ನು ಸಹಿಸುವುದಿಲ್ಲ. ಪೊಲೀಸ್ ಇಲಾಖೆಯ ಸಿಬ್ಬಂದಿ ಅಪರಾಧದಲ್ಲಿ ಭಾಗಿಯಾಗಿರುವುದು ಪತ್ತೆಯಾದರೆ ಅವರ ವಿರುದ್ಧ ಕಠಿಣ ಕ್ರಮ ನಿಶ್ಚಿತ’ ಎಂದರು.

ಮುಖ್ಯಮಂತ್ರಿಯವರ ನಿವಾಸದ ಸಮೀಪ ಭದ್ರತಾ ಕಾರ್ಯಕ್ಕೆ ನಿಯೋಜಿಸಿದ್ದ ಇಬ್ಬರು ಪೊಲೀಸರು ಗಾಂಜಾ ಮಾರಾಟದಲ್ಲಿ ತೊಡಗಿರುವುದು ಪತ್ತೆಯಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಸಿಬ್ಬಂದಿಯೇ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವುದನ್ನು ಪತ್ತೆ ಮಾಡಿರುವ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಲಾಗುವುದು. ಅವರಿಗೆ ಸೂಕ್ತ ಬಹುಮಾನ ಘೋಷಿಸಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಇದ್ದಾರೆ. ಅವರಲ್ಲಿ ಬೆರಳೆಣಿಕೆಯಷ್ಟು ಮಂದಿ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾದರೂ ಇಲಾಖೆಯ ಕುರಿತು ಸಾರ್ವಜನಿಕರಲ್ಲಿ ಕೆಟ್ಟ ಭಾವನೆ ಬೆಳೆಯುತ್ತದೆ. ಅಂತಹ ಸಿಬ್ಬಂದಿಗಳನ್ನು ಅಮಾನತು ಮಾಡುವುದಷ್ಟೇ ಅಲ್ಲ, ಸೇವೆಯಿಂದ ವಜಾಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.