ಶನಿವಾರ, ಸೆಪ್ಟೆಂಬರ್ 19, 2020
23 °C

ಸಾರ್ವಜನಿಕ ಆಸ್ತಿ ಹಾಳು ಮಾಡಿದವರಿಂದಲೇ ನಷ್ಟ ವಸೂಲಿ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ಗಲಭೆಗಳಲ್ಲಿ ಹಾನಿಗೀಡಾದ ಸಾರ್ವಜನಿಕ ಆಸ್ತಿಯ ಮೌಲ್ಯವನ್ನು ಗಲಭೆಕೋರರಿಂದಲೇ ವಸೂಲಿ ಮಾಡಬೇಕು ಎಂಬ ಸುಪ್ರೀಂಕೋರ್ಟ್‌ ತೀರ್ಪಿನ ಅನ್ವಯ ಕರ್ನಾಟಕ ಸರ್ಕಾರವೂ ಕಾರ್ಯನಿರ್ವಹಿಸಲಿದೆ' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆ ವೇಳೆ ಸಾರ್ವಜನಿಕ ಆಸ್ತಿಯನ್ನು ಹಾಳು ಮಾಡಿದವರನ್ನು ಸಿಸಿಟಿವಿ ಫೂಟೇಜ್ ಮತ್ತು ಪ್ರತ್ಯಕ್ಷದರ್ಶಿಗಳ ಸಾಕ್ಷಿಗಳ ಮೂಲಕ ಗುರುತಿಸಲಾಗುವುದು. ಅವರಿಂದಲೇ ನಷ್ಟವನ್ನು ವಸೂಲು ಮಾಡುತ್ತೇವೆ' ಎಂದು ಅವರು ಘೋಷಿಸಿದರು.

ಅಕ್ಷಮ್ಯ ಅಪರಾಧ

'ಯಾರೇ ಆಗಲಿ, ಸಾರ್ವಜನಿಕ ಆಸ್ತಿ ಹಾಳು ಮಾಡುವುದನ್ನು ಸಹಿಸಲು ಆಗುವುದಿಲ್ಲ. ಬೆಂಗಳೂರಿನಲ್ಲಿ ಆಗಿರುವ ಪೂರ್ವ ನಿಯೋಜಿತ ಗಲಭೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದರು.

'ಯಾರದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯೊದಗಿದ್ದರೆ ಪೊಲೀಸರಿಗೆ ದೂರು ನೀಡಬೇಕಿತ್ತು. ಅದು ಬಿಟ್ಟು ಹೀಗೆ ಕಾನೂನು ಕೈಗೆತ್ತಿಕೊಂಡು ಆಸ್ತಿಪಾಸ್ತಿ ಹಾಳು ಮಾಡುವುದು. ಮನೆಗಳಿಗೆ ಕಲ್ಲು ತೂರುವುದು ಅಕ್ಷಮ್ಯ. ಪೊಲೀಸರು ಕಠಿಣ ಕ್ರಮ ತಗೊಂಡಿದ್ದಾರೆ, ಗಲಭೆ ನಿಯಂತ್ರಿಸಿದ್ದಾರೆ. ಈ ಕುರಿತು ಗೃಹ ಸಚಿವ ಬೊಮ್ಮಾಯಿ ಅವರ ಜೊತೆಗೆ ಮಾತನಾಡಿದ್ದೇನೆ' ಎಂದು ಅವರು ಹೇಳಿದರು.

ಧೈರ್ಯ ತುಂಬಿದ ಸ್ವಾಮೀಜಿ

ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ನಗರದಲ್ಲಿ ಭೇಟಿ ಮಾಡಿದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿ ವಿವಿಧ ಮಠಗಳ ಹಲವು ಸ್ವಾಮೀಜಿಗಳು ಧೈರ್ಯ ತುಂಬಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು