ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರುವುದು ನಿಶ್ಚಿತ?

ಪ್ರಧಾನಿ ಭೇಟಿಗೂ ಮೊದಲು ಕುತೂಹಲ ಮೂಡಿಸಿದ ಸಂಸದರ ಪತ್ರಿಕಾಗೋಷ್ಠಿ
Last Updated 9 ಮಾರ್ಚ್ 2023, 13:43 IST
ಅಕ್ಷರ ಗಾತ್ರ

ಮಂಡ್ಯ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಬಿಜೆಪಿ ಬೆಂಬಲಿಸುವುದು ನಿಶ್ಚಿತವಾಗಿದ್ದು ಮಾರ್ಚ್‌ 12ರಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ (ಮಾರ್ಚ್‌ 10) ಮಧ್ಯಾಹ್ನ 12 ಗಂಟೆಗೆ ನಗರದಲ್ಲಿ ಸುಮಲತಾ ಪತ್ರಿಕಾಗೋಷ್ಠಿ ಕರೆದಿದ್ದು ಅಲ್ಲಿ ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಲಿದ್ದಾರೆ ಎಂದೇ ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ಬಹಳ ಪ್ರಾಮುಖ್ಯತೆ ಪಡೆದುಕೊಂಡಿದ್ದು ಜಿಲ್ಲೆಯ ಜನರಲ್ಲಿ ಕುತೂಹಲ ಮೂಡಿಸಿದೆ.

‘ಸುಮಲತಾ ಅವರಿಗೆ ಕಾಂಗ್ರೆಸ್‌ ಸೇರುವ ಮನಸ್ಸಿತ್ತು. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ನಿರ್ಲಕ್ಷ್ಯ ಮಾಡಿದರು. ಮುಂದಿನ ಚುನಾವಣೆ ದೃಷ್ಟಿಯಿಂದ ಅವರು ಇನ್ನೊಂದು ಪಕ್ಷ ಸೇರಲೇಬೇಕು. ಸಂಸದರು ಯಾವುದೇ ತೀರ್ಮಾನ ಕೈಗೊಂಡರೂ ನಾವು ಅವರ ಜೊತೆಯಲ್ಲಿರುತ್ತೇವೆ’ ಎಂದು ಸುಮಲತಾ ಬೆಂಬಲಿಗ ಬೇಲೂರು ಸೋಮಶೇಖರ್‌ ಹೇಳಿದರು.

ಪ್ರಧಾನಿ ಭೇಟಿ ಅಂಗವಾಗಿ ಈಚೆಗೆ ನಗರದಲ್ಲಿ ಬಿಜೆಪಿ ಮುಖಂಡರು ನಡೆಸಿದ್ದ ಪೂರ್ವಭಾವಿ ಸಭೆಯಲ್ಲಿ ಸುಮಲತಾ ಪಾಲ್ಗೊಂಡು ಅಚ್ಚರಿ ಸೃಷ್ಟಿಸಿದ್ದರು. ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಅವರು ಅಂದು ಮಾತನಾಡಿರಲಿಲ್ಲ. ಆದರೆ, ದೆಹಲಿ ಮಟ್ಟದಲ್ಲಿಯೇ ಬಿಜೆಪಿ ಸೇರುವ ತೀರ್ಮಾನವಾಗಿದೆ ಎಂದು ಕೆಲ ಬಿಜೆಪಿ ಮುಖಂಡರು ತಿಳಿಸುತ್ತಾರೆ.

ಯಾವುದಾದರೊಂದು ರಾಜಕೀಯ ಪಕ್ಷ ಸೇರುವಂತೆ ಅವರ ಬೆಂಬಲಿಗರು ಕೂಡ ಈಚೆಗೆ ಒತ್ತಾಯಿಸಿದ್ದರು. ಅವರ ಮನವಿ ಪರಿಗಣಿಸಿರುವ ಸುಮಲತಾ ಬಿಜೆಪಿ ಸೇರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಪತ್ರಿಕ್ರಿಯೆಗೆ ಸುಮಲತಾ ಲಾಭ್ಯವಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT