ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರ ಕಾರ್ಮಿಕರ ಕಾಯಂ- ಜಂಟಿ ಸಮಿತಿ ಶಿಫಾರಸು ಮಾಡಿದ ತಕ್ಷಣ ಪ್ರಕ್ರಿಯೆ: ಬೊಮ್ಮಾಯಿ

Last Updated 2 ಜುಲೈ 2022, 5:45 IST
ಅಕ್ಷರ ಗಾತ್ರ

ಬೆಂಗಳೂರು: 'ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

'ನೇರ ವೇತನ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ತಾತ್ವಿಕವಾಗಿ ಸರ್ಕಾರ ಒಪ್ಪಿಕೊಂಡಿದೆ. ಕಾನೂನಾತ್ಮಕವಾಗಿ ಹಾಗೂ ತಾಂತ್ರಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಪೌರ ಕಾರ್ಮಿಕರ ಹಾಗೂ ಅಧಿಕಾರಿಗಳ ಜಂಟಿ ಸಮಿತಿ ರಚಿಸಲಾಗಿದೆ. ಈ ಸಮಿತಿ ಶಿಫಾರಸ್ಸು ಮಾಡಿದ ತಕ್ಷಣ ಪ್ರಕ್ರಿಯೆ ಆರಂಭಿಸಲಾಗುವುದು' ಎಂದರು.

'ಪೌರ ಕಾರ್ಮಿಕರಿಗೆ ಆರೋಗ್ಯ, ಶಿಕ್ಷಣ ಸೇರಿದಂತೆ ಎಲ್ಲ ದೃಷ್ಟಿಯಿಂದ ಕಾಯಂ ಆಗಿ ಸುರಕ್ಷತೆ ನೀಡಲು ಒಪ್ಪಲಾಗಿದೆ. ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗುವುದು.ಸೌಹಾರ್ದತೆಯಿಂದ ಸಮಸ್ಯೆಯನ್ನುಬಗೆಹರಿಸಲಾಗುವುದು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT