ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಗಗ್ರಸ್ತ ಕೈಗಾರಿಕಾ ಘಟಕಗಳ ಪುನಶ್ಚೇತನಕ್ಕೆ ಕ್ರಮ: ಸಚಿವ ನಾಗರಾಜ್

Last Updated 23 ಅಕ್ಟೋಬರ್ 2022, 20:45 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್‌ನಿಂದ ಬಹಳಷ್ಟು ಕೈಗಾರಿಕಾ ಘಟಕಗಳು ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಅವುಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ಸಣ್ಣ ಕೈಗಾರಿಕೆ ಸಚಿವ ಎಂ.ಟಿ.ಬಿ. ನಾಗರಾಜ್ ಭರವಸೆ ನೀಡಿದರು.

ಕಾಸಿಯಾ ಮತ್ತು ಎಂ.ಎಸ್.ಎಂ.ಇ ಅಭಿವೃದ್ಧಿ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ವಿ.ಡಿ.ಪಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ‘ಯಾವ ಕಾರಣಕ್ಕಾಗಿ ಕೈಗಾರಿಕಾ ಘಟಕಗಳು ಮುಚ‌ಲ್ಪಟ್ಟಿವೆ ಎಂಬುದನ್ನು ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಣ್ಣ ಕೈಗಾರಿಕೆಗಳ ಸ್ಥಾಪನೆಗಾಗಿ ತಾಲ್ಲೂಕು ಮಟ್ಟದಲ್ಲಿ ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

‘ಕಾಸಿಯಾ ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ ಆ್ಯಂಡ್ ಇನ್ನೋವೇಶನ್ ಯೋಜನೆಗೆ ಬರಬೇಕಾಗಿದ್ದ ₹2.65 ಕೋಟಿ ಅನುದಾನ ಶೀಘ್ರ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ನೆಲಮಂಗಲ ಕೈಗಾರಿಕಾ ವಸಾಹತುವಿಗೆ ಸಂಬಂಧಿಸಿದ ಸಮಸ್ಯೆಗಳು, ಕೈಗಾರಿಕಾ ಘಟಕಗಳಿಗೆ ವಿಧಿಸುತ್ತಿರುವ ಆಸ್ತಿ ತೆರಿಗೆ ಸಂಬಂಧಿಸಿದ ಬೇಡಿಕೆಗಳ ಕುರಿತು ಅಧಿಕಾರಿಗಳ ಮಟ್ಟದಲ್ಲಿ ಸಭೆ ಆಯೋಜಿಸಿ ಬಗೆಹರಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT