ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲರಿಗೂ ನ್ಯಾಯ ಒದಗಿಸಲು ಪ್ರಯತ್ನ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ

Last Updated 18 ಫೆಬ್ರುವರಿ 2021, 19:55 IST
ಅಕ್ಷರ ಗಾತ್ರ

ಬೆಂಗಳೂರು: ‘ಮೀಸಲಾತಿಯ ವಿಚಾರದಲ್ಲಿ ಕಾನೂನು ಚೌಕಟ್ಟಿನಲ್ಲಿ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸಲು ಪ್ರಯತ್ನ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಗುರುವಾರ ರಾಜ್ಯ ಉಗ್ರಾಣ ನಿಗಮದ ನೂತನ ಆಡಳಿತ ಕಚೇರಿ ಉದ್ಘಾಟನೆ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ವಾಲ್ಮೀಕಿ ಸಮುದಾಯ, ಕುರುಬ ಸಮುದಾಯ ಸೇರಿದಂತೆ ಯಾವುದೇ ಸಮುದಾಯದವರು ಮೀಸಲಾತಿಗಾಗಿ ಹೋರಾಟ ಮಾಡಿದರೂ ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲಿ ನ್ಯಾಯ ಒದಗಿಸುವುದು ನನ್ನ ಜವಾಬ್ದಾರಿ’ ಎಂದರು.

ಎಲ್ಲ ಸಮುದಾಯಗಳಿಗೂ ಹೋರಾಟ ಮಾಡುವ ಹಕ್ಕಿದೆ. ಕಾನೂನು ವ್ಯಾಪ್ತಿಯಲ್ಲಿ ಆಯಾ ಸಮುದಾಯಗಳಿಗೆ ಸಿಗಬೇಕಾದ ಸೌಲಭ್ಯ ಖಂಡಿತವಾಗಿಯೂ ದೊರಕುತ್ತದೆ. ಹೋರಾಟಕ್ಕೆ ತಮ್ಮ ವಿರೋಧವಿಲ್ಲ. ಆದರೆ, ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ವಿಸ್ತೃತವಾಗಿ ಚರ್ಚಿಸಬೇಕಾಗುತ್ತದೆ ಎಂದುಹೇಳಿದರು.

‘ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹದಲ್ಲಿ ಅಕ್ರಮ ನಡೆಯುತ್ತಿದೆ’ ಎಂಬ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಅತ್ಯಂತ ಪಾರದರ್ಶಕವಾಗಿ ನಿಧಿ ಸಂಗ್ರಹ ಕೆಲಸ ನಡೆಯುತ್ತಿದೆ’ ಎಂದರು.

‘ಯಾವುದೇ ಸಂಘಟನೆಯೂ ಬಲವಂತವಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲು ಅವಕಾಶವಿಲ್ಲ. ಕುಮಾರಸ್ವಾಮಿ ಅವರು ತಪ್ಪು ಗ್ರಹಿಕೆಯಿಂದ ಮಾತನಾಡಿರಬಹುದು. ಈ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು’ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT