ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಪರ ಕೆಲಸ ಮಾಡುವೆ: ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌

Last Updated 7 ಆಗಸ್ಟ್ 2021, 22:43 IST
ಅಕ್ಷರ ಗಾತ್ರ

ಬೆಂಗಳೂರು: ‘ಹಿಂದಿನ ಅವಧಿಯಲ್ಲಿ ಸಹಕಾರ ಸಚಿವನಾಗಿ ನಾನು ಮಾಡಿದ್ದ ಕೆಲಸವನ್ನು ಆಧರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಮತ್ತೆ ಅದೇ ಖಾತೆ ನೀಡಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡು ರೈತರ ಪರವಾಗಿ ಮತ್ತಷ್ಟು ಕೆಲಸ ಮಾಡುತ್ತೇನೆ’ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದ್ದಾರೆ.

ಶನಿವಾರ ಖಾತೆ ಹಂಚಿಕೆ ಬಳಿಕ ಪ್ರತಿಕ್ರಿಯಿಸಿರುವ ಅವರು, ‘ಸಹಕಾರ ಖಾತೆ ನೇರವಾಗಿ ರೈತರಿಗೆ ಸಂಬಂಧಿಸಿದ್ದು. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸಹಕಾರ ಇಲಾಖೆಯ ಮೂಲಕ 30 ಲಕ್ಷ ರೈತರಿಗೆ ₹ 20,810 ಕೋಟಿ ಸಾಲ ನೀಡುವ ಗುರಿ ಇದೆ. ಈವರೆಗೆ 8.39 ಲಕ್ಷ ರೈತರಿಗೆ ₹ 6,318 ಕೋಟಿ ಸಾಲ ವಿತರಿಸಲಾಗಿದೆ. ಸಂಪೂರ್ಣವಾಗಿ ಗುರಿ ಸಾಧಿಸಲು ಪ್ರಯತ್ನಿಸುತ್ತೇನೆ’ ಎಂದಿದ್ದಾರೆ.

ನಿಯಮಿತವಾಗಿ ಸಹಕಾರ ಬ್ಯಾಂಕ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಹೊಸ ರೈತರಿಗೆ ಸಾಲ ನೀಡುವ ಮೂಲಕ ಅವರನ್ನು ಸಹಕಾರ ಸಂಸ್ಥೆಗಳ ವ್ಯಾಪ್ತಿಗೆ ತರಲಾಗುವುದು. ರಾಜ್ಯದ ರೈತರ ಅಭಿವೃದ್ಧಿಗೆ ಪೂರಕವಾಗಿ ಈ ಅವಕಾಶವನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT