ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೋನ್ ಟ್ಯಾಪಿಂಗ್: ಸರ್ಕಾರ ತನಿಖೆ ನಡೆಸದಿದ್ದರೆ ಕೇಂದ್ರಕ್ಕೆ ಪತ್ರ; ಡಿ.ಕೆ.ಸುರೇಶ್

Last Updated 23 ಆಗಸ್ಟ್ 2020, 13:48 IST
ಅಕ್ಷರ ಗಾತ್ರ

ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಅವರ ಫೋನ್‌ ಟ್ಯಾಪಿಂಗ್‌ ಕೇವಲ ಆರೋಪವಲ್ಲ, ಅದು ಸತ್ಯ. 15 ದಿನಗಳಿಂದ ಫೋನ್‌ ಕರೆ ವೇಳೆ ಅಡಚಣೆ ಬರುತ್ತಿದೆ’ ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿದರು.

ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ತನಿಖೆ ನಡೆಸಿಲ್ಲ ಎಂದರೆ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ’. ‘ಕೆಲವರು ದೂರು ನೀಡುವಂತೆ ಹೇಳಿದ್ದರು. ಅದಕ್ಕೆ ಈಗ ದೂರು ನೀಡಿದ್ದಾರೆ. ಬೇರೆಯವರ ಮೇಲೆ ಗೂಬೆ ಕೂರಿಸಿ ತಾವು ತಪ್ಪಿಸಿಕೊಳ್ಳುವುದರಲ್ಲಿ ಬಿಜೆಪಿ ನಾಯಕರು ಬಹಳ ಪರಿಣಿತರು’ ಎಂದು ಹೇಳಿದರು.

‘ಒಂದು ಪಕ್ಷದ ಅಧ್ಯಕ್ಷರು ಫೋನ್‌ ಟ್ಯಾಪಿಂಗ್‌ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಇದನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಡುವುದಕ್ಕೆ ಅವಕಾಶವಿಲ್ಲ. ಈ ವಿಷಯವನ್ನು ಸರ್ಕಾರ ಗಂಭಿರವಾಗಿ ಪರಿಗಣಿಸಬೇಕು’ ಎಂದೂ ಅವರು ಹೇಳಿದರು.

‘ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಲಘುವಾಗಿ ಮಾತನಾಡಬಾರದು. ಡಿ.ಕೆ. ಶಿವಕುಮಾರ್‌ ಅವರು ರಾಜ್ಯ ಸರ್ಕಾರಕ್ಕೆ ಮಾಡಿರುವ ಮನವಿಯನ್ನು ಮೊದಲು ಪರಿಗಣಿಸಬೇಕು. ಇಲ್ಲವಾದರೇ ನಾನೇ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ’ ಎಂದರು.

‘ಡಿ.ಜೆ. ಹಳ್ಳಿ ಪ್ರಕರಣಕ್ಕೂ ಫೋನ್‌ ಟ್ಯಾಪಿಂಗ್‌ಗೂ ಸಂಬಂಧವಿಲ್ಲ. ಗಲಭೆ ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಈ ಪ್ರಕರಣವನ್ನು ಬಳಸಿಕೊಳ್ಳುತ್ತಿದೆ’ ಎಂದೂ ಅವರು ಆರೋಪಿಸಿದರು.

‘ಬಿಬಿಎಂಪಿ‌ ಚುನಾವಣೆ ಬರುತ್ತಿದೆ. ಅದಕ್ಕೆ ಬಿಜೆಪಿ ನಾಯಕರು ಈ ರೀತಿ ಮಾಡುತ್ತಿದ್ದಾರೆ. ಪೊಲೀಸರ ಮೇಲೆ ಒತ್ತಡ ತರುತ್ತಿದ್ದಾರೆ. ಸಾವಿನ ಮೇಲೆ ಹೆಣದ ರಾಜಕೀಯ ಮಾಡುತ್ತಿದ್ದಾರೆ. ಈಗ ಈ ಪ್ರಕರಣವನ್ನು ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ’ ಎಂದೂ ದೂರಿದರು.

‘ಡಿ.ಜೆ ಹಳ್ಳಿ ಪ್ರಕರಣದಲ್ಲಿ ಗುಪ್ತಚರ ವಿಭಾಗದ ವೈಫಲ್ಯವಿದೆ. ಅದನ್ನು ಸರ್ಕಾರ ಒಪ್ಪಿಕೊಳ್ಳಬೇಕು. ಅದನ್ನು ಬಿಟ್ಟು ಮುಚ್ಚಿ ಹಾಕಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ’ ಎಂದೂ ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಷರ ಬೆಳಗಾವಿ ಪ್ರವಾಸ ಮುಂದೂಡಿಕೆ: ಪ್ರವಾಹಪೀಡಿತ ಪ್ರದೇಶಗಳ ಪರಿಶೀಲನೆಗೆ ಸೋಮವಾರ (ಆ. 24) ತೆರಳಬೇಕಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪ್ರವಾಸವನ್ನು ಮುಂದೂಡಿದ್ದಾರೆ.

‘ಶಿವಕುಮಾರ್‌ ಅವರು ತೀವ್ರ ಬೆನ್ನು‌ ನೋವಿನಿಂದ ಬಳಲುತ್ತಿದ್ದು, ವೈದ್ಯರ ಸಲಹೆಯ ಮೇರೆಗೆ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲೇ ವಿಶ್ರಾಂತಿ ತೆಗೆದುಕೊಂಡಿದ್ದಾರೆ’ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT