ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಳಿಗಾಲದ ಅಧಿವೇಶನ ಡಿಸೆಂಬರ್ 7 ರಿಂದ 15ರವರೆಗೆ

Last Updated 18 ನವೆಂಬರ್ 2020, 12:02 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿ.7 ರಿಂದ 15 ರವರೆಗೆ ಬೆಂಗಳೂರಿನಲ್ಲೇ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

‘ಶಾಸನ ಸಭೆಯ ನಿಯಮದ ಪ್ರಕಾರ ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ಅಧಿವೇಶನ ನಡೆಸಬೇಕು. ಆದ್ದರಿಂದ, ಅಧಿವೇಶನದ ದಿನಾಂಕವನ್ನು ನಿಗದಿ ಮಾಡಲಾಗಿದೆ’ ಎಂದು ಅವರು ಹೇಳಿದರು.

ಚಳಿಗಾಲದ ಅಧಿವೇಶನವನ್ನು ಸಾಮಾನ್ಯವಾಗಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲಾಗುತ್ತಿತ್ತು. ಕಳೆದ ವರ್ಷ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಕ್ಕೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ಬೆಂಗಳೂರಿನಲ್ಲಿ ಅಧಿವೇಶನ ನಡೆಸಲಾಗಿತ್ತು. ಈ ವರ್ಷ ಕೋವಿಡ್‌ ಕಾರಣದಿಂದ ವಿಧಾನಸೌಧದಲ್ಲೇ ನಡೆಸಲು ತೀರ್ಮಾನಿಸಲಾಗಿದೆ.

19 ನಿರ್ಬಂಧಿತ ರಜೆ: ರಾಜ್ಯ ಸರ್ಕಾರಿ ನೌಕರರಿಗೆ 2021 ನೇ ಸಾಲಿನಲ್ಲಿ 21 ಸಾರ್ವತ್ರಿಕ ರಜೆ ಮತ್ತು 19 ನಿರ್ಬಂಧಿತ ರಜೆಗಳನ್ನು ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT