ಬುಧವಾರ, ಜೂನ್ 29, 2022
24 °C

ಹೊಸ ಪಠ್ಯ ತಡೆಹಿಡಿಯಿರಿ: ಹಂ.ಪ. ನಾಗರಾಜಯ್ಯ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗಿವೆ. ಆದರೆ, ಪಠ್ಯಪುಸ್ತಕ ವಿವಾದ ಚಕ್ರತೀರ್ಥದಲ್ಲಿ ಒದ್ದಾಡುತ್ತ, ಸರ್ಕಾರವನ್ನು ಪೇಚಿಗೆ ಸಿಲುಕಿಸಿವೆ ಎಂದು ಸಾಹಿತಿ ಹಂ.ಪ. ನಾಗರಾಜಯ್ಯ ಹೇಳಿದ್ದಾರೆ.

‘ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದ ಭಿನ್ನಾಭಿಪ್ರಾಯಗಳು ತಾರ್ಕಿಕ ಅಂತ್ಯ ಕಾಣುವವರೆಗೆ ಹೊಸ ಪಠ್ಯವನ್ನು ತಡೆಹಿಡಿದು, ಹಿಂದಿನ ಪಠ್ಯವನ್ನೇ ಮುಂದುವರೆಸಲು ಸುತ್ತೋಲೆ ಹೊರಡಿಸಬೇಕು. ಈ ಮೂಲಕ ಕಲುಷಿತ ವಾತಾವರಣ ತಿಳಿಗೊಳಿಸಬೇಕು’ ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಬಗ್ಗೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ‘ಶಾಲೆಗಳು ಪ್ರಾರಂಭವಾಗಿವೆ. ಆದರೆ, ಪಠ್ಯಪುಸ್ತಕ ವಿವಾದ ಚಕ್ರತೀರ್ಥದಲ್ಲಿ ಒದ್ದಾಡುತ್ತ, ಸರ್ಕಾರವನ್ನು ಪೇಚಿಗೆ ಸಿಲುಕಿಸಿದೆ ಎಂದಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತಳಮಳವಾಗುತ್ತಿದೆ. ವ್ಯಕ್ತಿಗಳನ್ನು ಅನಗತ್ಯವಾಗಿ ನಿಂದನೆ ಮಾಡುವ ಅಪಾಯದ ಪ್ರವೃತ್ತಿ ಹಬ್ಬುತ್ತಿದೆ. ಕುವೆಂಪು ಕುರಿತು ಅವಹೇಳನಕಾರಿ ಬರಹಗಳು ಹರಿದಾಡುತ್ತಿವೆ. ದಿನದಿಂದ ದಿನಕ್ಕೆ ಪರ ವಿರೋಧದ ಚರ್ಚೆಗಳು ತೂಕ ತಪ್ಪಿ ಬಿಸಿ ಏರುತ್ತಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಈ ಅನಾರೋಗ್ಯಕರ ಬೆಳವಣಿಗೆಗೆ ಸರ್ಕಾರ ತಟಸ್ಥವಾಗಿರದೆ, ಕೂಡಲೇ ಕಾರ್ಯಪ್ರವೃತರಾಗಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು