ಗುರುವಾರ , ಏಪ್ರಿಲ್ 22, 2021
28 °C

ರಮೇಶ ಜಾರಕಿಹೊಳಿ | ಸಿ.ಡಿ.ಯಲ್ಲಿರುವ ಯುವತಿಯ ಅಪಹರಣ ದೂರು: ತನಿಖಾ ತಂಡ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ.ಯಲ್ಲಿರುವ ಯುವತಿಯ ಅಪಹರಣವಾಗಿದ್ದು, ಹುಡುಕಿಕೊಡುವಂತೆ ಅವರ ತಂದೆ ದೂರು ನೀಡಿರುವ ಹಿನ್ನೆಲೆಯಲ್ಲಿ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದರು.

ಮಾರ್ಕೆಟ್ ಎಸಿಪಿ ಹಾಗೂ ಎಪಿಎಂಸಿ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಎಫ್ ಐ ಆರ್ ದಾಖಲಾಗಿದೆ. ಭದ್ರತೆ ನೀಡುವಂತೆ ಕೋರಿದ್ದರೆ, ವ್ಯಾಪ್ತಿಯ ಪೊಲೀಸ್ ಠಾಣೆ ಪೊಲೀಸರು ನಿರ್ಧರಿಸುತ್ತಾರೆ ಎಂದು ಹೇಳಿದರು.

ತಂಡವು ಯುವತಿಯ ಹುಡುಕಾಟಕ್ಕಾಗಿ ಬೆಂಗಳೂರಿಗೆ ತೆರಳುವ ಸಾಧ್ಯತೆ ಇದೆ. ಮಗಳ ಅಪಹರಣವಾಗಿದೆ ಎಂದು ತಂದೆ ಮಂಗಳವಾರವಷ್ಟೆ ಎಪಿಎಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದನ್ನು ಆಧರಿಸಿ ತನಿಖೆ ಆರಂಭಿಸಲಾಗಿದೆ.

ಯುವತಿಯ ಕುಟುಂಬದವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು