ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂದು ಕರಂದ್ಲಾಜೆ ಎದುರಿಗೆ ಕಣ್ಣೀರಿಟ್ಟ ಕಾರ್ಯಕರ್ತೆ!

Last Updated 4 ಸೆಪ್ಟೆಂಬರ್ 2021, 14:26 IST
ಅಕ್ಷರ ಗಾತ್ರ

ಕಲಬುರ್ಗಿ: 25 ವರ್ಷದಿಂದ ಪಕ್ಷದಲ್ಲಿ ದುಡಿದು ನಾನು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಡರೂ, ನನಗೆ ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂದು ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಸಾವಿತ್ರಿ ಕುಳಗೇರಿ ಕಣ್ಣೀರುಸುರಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ‌ ಶನಿವಾರ ಕಾರ್ಯಕರ್ತರ ಸಭೆ ಮುಗಿದ ಬಳಿಕ, ಸಚಿವೆ ಶೋಭಾ ಅವರಿಗೆ ಶಾಲು ಹೊದಿಸುವ ಸಂದರ್ಭದಲ್ಲಿ ಭಾವುಕರಾಗಿ ತಮ್ಮ ಅಳಲನ್ನು ತೊಡಿಕೊಂಡರು.

ಶುಕ್ರವಾರ ನಡೆದ ಮಹಾನಗರ ಪಾಲಿಕೆ ಚುನಾವಣೆಗೆ ವಾರ್ಡ್ ನಂ- 31ರ ಬಿಜೆಪಿ ಟಿಕೆಟ್ ಕೇಳಿದ್ದೆ. ಆದರೆ ನನಗೆ ದೊರಕಿಲ್ಲ ಎಂದು ಸಚಿವೆ ಶೋಭಾ ಕರಂದ್ಲಾಜೆ ಎದುರಿಗೆ ಹೇಳಿಕೊಂಡರು.

ಮೊನ್ನೆ ಮೊನ್ನೆ ಬಂದವರಿಗೆ ನಿಗಮ ಮಂಡಳಿ ಸ್ಥಾನವನ್ನು ನೀಡಿದ್ದರಿಂದ ದಶಕಗಳಿಂದ ಪಕ್ಷದ ಸಂಘಟನೆಗಾಗಿ ದುಡಿದವರಿಗೆ ನೋವುಂಟಾಗಿದೆ ಎಂದು ಹೇಳಿದರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಮುಂಬರುವ ದಿನಗಳಲ್ಲಿ ನನಗೆ ಸೂಕ್ತ ಸ್ಥಾನಮಾನ ಕೊಡುವ ಬಗ್ಗೆ ಭರವಸೆ ನೀಡಿದ್ದು, ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡುವುದಾಗಿ ಸಾವಿತ್ರಿ ತಿಳಿಸಿದ್ದಾರೆ.

ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂದು ಕರಂದ್ಲಾಜೆ ಎದುರಿಗೆ ಕಣ್ಣೀರಿಟ್ಟ ಕಾರ್ಯಕರ್ತೆ!

ಮಹಿಳಾ ಕಾರ್ಯಕರ್ತರು ಕಣ್ಣೀರಿಟ್ಟು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದರೂ ಅವರನ್ನು ಸಮಾಧಾನ ಹೇಳುವ ಬದಲು ಸಚಿವೆ ಶೋಭಾ ವೇದಿಕೆಯಿಂದ ನಿರ್ಗಮಿಸಿದರು.

ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ‌ಮತ್ತಿಮೂಡ, ಬಿಜೆಪಿ ಜಿಲ್ಲಾ ಅಧ್ಯಕ್ಷ ‌ಶಿವರಾಜ ಪಾಟೀಲ ರದ್ದೇವಾಡಗಿ ಈ ಸಂದರ್ಭದಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT