ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ಳಂದೂರು: ಟೆಕ್ಕಿ ಮನೆಯಲ್ಲಿ ಕೆಲಸಕ್ಕಿದ್ದ ಯುವತಿ ಶವ ಬಾತ್‌ರೂಂನಲ್ಲಿ ಪತ್ತೆ

Last Updated 2 ಜನವರಿ 2022, 6:04 IST
ಅಕ್ಷರ ಗಾತ್ರ

ಬೆಂಗಳೂರು: ಸಾಫ್ಟ್‌ವೇರ್‌ ಕಂಪನಿ ಉದ್ಯೋಗಿಯೊಬ್ಬರ ಮನೆಯಲ್ಲಿಕೆಲಸಕ್ಕಿದ್ದ ಯುವತಿಯ ಶವವು ಸ್ನಾನದ ಕೋಣೆಯಲ್ಲಿ ಪತ್ತೆಯಾಗಿದೆ. ಬೆಳ್ಳಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ತಮಿಳುನಾಡು ಮೂಲದ ಕವಿತಾ (19) ಮೃತ ಯುವತಿ. ಆಕೆ ವಿವೇಕ್‌ ಎಂಬುವರ ಬೆಳ್ಳಂದೂರಿನ ಮನೆಯಲ್ಲಿ ಮಗು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದಳು. ಶನಿವಾರ ಬೆಳಿಗ್ಗೆ ಸ್ನಾನದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಈ ಕುರಿತು ಯುವತಿಯ ತಾಯಿ ದೂರು ನೀಡಿದ್ದಾರೆ. ಅದರ ಆಧಾರದಲ್ಲಿ ಅನುಮಾನಾಸ್ಪದ ಸಾವು‍ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕ್ರಿಯೆ ಮುಗಿದ ಬಳಿಕ ಪೋಷಕರಿಗೆ ಹಸ್ತಾಂತರಿಸಲಾಗುತ್ತದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT