ಭಾನುವಾರ, ಆಗಸ್ಟ್ 14, 2022
27 °C

ಇಂದಿನಿಂದ ವಂಡರ್‌ಲಾ ರೆಸಾರ್ಟ್‌ ಪುನರಾರಂಭ: ವಿಶೇಷ ರಿಯಾಯಿತಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನಗರದ ವಂಡರ್‌ಲಾ ಅಮ್ಯೂಸ್‌ಮೆಂಟ್‌ ಪಾರ್ಕ್‌ ಸಮೀಪವಿರುವ ವಂಡರ್‌ಲಾ ಹೋಟೆಲ್‌ ಹಾಗೂ ರೆಸಾರ್ಟ್‌ ಸೋಮವಾರದಿಂದ (ಜು.5) ಪುನರಾರಂಭವಾಗಲಿವೆ’ ಎಂದು ವಂಡರ್‌ಲಾ ಹಾಲಿಡೇಸ್‌ ಭಾನುವಾರ ತಿಳಿಸಿದೆ.

‘ಬೆಂಗಳೂರು–ಮೈಸೂರು ರಸ್ತೆಯಲ್ಲಿರುವ ವಂಡರ್‌ಲಾ ರೆಸಾರ್ಟ್‌ ಶೇ 50ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯಾರಂಭವಾಗಲಿದೆ. ಗ್ರಾಹಕರನ್ನು ಆಕರ್ಷಿಸುವ ಸಲುವಾಗಿ ವಿಶೇಷ ರಿಯಾಯಿತಿಗಳನ್ನೂ ಪ್ರಕಟಿಸಲಾಗಿದೆ.

ಲಾಕ್‌ಡೌನ್‌ ನಿಯಮಾವಳಿ ಹಿನ್ನೆಲೆಯಲ್ಲಿ ಅಮ್ಯೂಸ್‌ಮೆಂಟ್‌ ಪಾರ್ಕ್‌ಗಳನ್ನು ತೆರೆಯದಿರಲು ನಿರ್ಧರಿಸಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು