ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಅರಣ್ಯ ದಿನದಂದೇ ಪ್ರಶಸ್ತಿ ವಿತರಣೆಗೆ ಆಗ್ರಹ

Last Updated 10 ಫೆಬ್ರುವರಿ 2023, 21:55 IST
ಅಕ್ಷರ ಗಾತ್ರ

ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡುವ ಮುಖ್ಯಮಂತ್ರಿಗಳ ಪದಕ ಮತ್ತು ಪ್ರಶಸ್ತಿ ವಿತರಿಸುವಲ್ಲಿ ತಡ ಮಾಡುತ್ತಿರುವ ಬಗ್ಗೆ ಇಲಾಖೆಯ ಸಿಬ್ಬಂದಿಯಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ಪೊಲೀಸ್‌ ಇಲಾಖೆ ಮಾದರಿಯಲ್ಲಿ ಕರ್ನಾಟಕ ಅರಣ್ಯ ಇಲಾಖೆಯಲ್ಲೂ ಅರಣ್ಯ ಸಂರಕ್ಷಣೆ, ಅಕ್ರಮ ಕಡಿತಲೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಪ್ರದೇಶವನ್ನು ಒತ್ತುವರಿದಾರರಿಂದ ತೆರವುಗೊಳಿಸುವುದು ಇತ್ಯಾದಿ ಕೆಲಸಗಳಲ್ಲಿ ಗಣನೀಯ ಸಾಧನೆ ಮಾಡಿದ ಅರ್ಹ 25 ಅಧಿಕಾರಿ ಮತ್ತು ಸಿಬ್ಬಂದಿಗೆ ಪ್ರತಿ ವರ್ಷ ಚಿನ್ನದ ಪದಕ ನೀಡಲು ತೀರ್ಮಾನಿಸಿ 2017 ರಲ್ಲೇ ಆದೇಶ ಹೊರಡಿಸಲಾಗಿತ್ತು. ಆದರೆ, ಈ ಆದೇಶ ಸರಿಯಾಗಿ ಪಾಲಿಸದೇ ಇರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ವನ್ಯಜೀವಿ ಸಂರಕ್ಷಣವಾದಿ ಗಿರಿಧರ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2017,2018 ಮತ್ತು 2019 ರ ಸಾಲಿನ ಪ್ರಶಸ್ತಿಗಳನ್ನು ಆದೇಶದ ಅನುಸಾರ ಆಯಾ ವರ್ಷ ಮಾರ್ಚ್‌ 21 ರಂದು ವಿತರಿಸುವ ಬದಲು ಎಲ್ಲ ಮೂರು ವರ್ಷಗಳ ಪ್ರಶಸ್ತಿಗಳನ್ನು ಒಟ್ಟಿಗೆ 2020 ರ ನವೆಂಬರ್‌ನಲ್ಲಿ ವಿತರಿಸಲಾಗಿದೆ. ಆದರೆ, 2020,2021 ಮತ್ತು 2022 ನೇ ಸಾಲಿನ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆಯಾದರೂ ಇನ್ನೂ ವಿತರಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅವರು ಹೇಳಿದ್ದಾರೆ.

ಇಲಾಖೆಯ ಮಟ್ಟದಿಂದ ಸರಿಯಾದ ಸಮಯಕ್ಕೆ ಶಿಫಾರಸುಗಳನ್ನು ಪ್ರತಿ ವರ್ಷ ಕಳುಹಿಸಲಾಗುತ್ತಿದ್ದರೂ ಪದಕಗಳನ್ನು ಸಕಾಲದಲ್ಲಿ ವಿತರಿಸಲು ಸರ್ಕಾರದ ಮಟ್ಟದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತಿಲ್ಲ. ಇನ್ನಷ್ಟು ತಡ ಮಾಡದೇ ಆದೇಶ ಪ್ರಕಾರ ಮಾರ್ಚ್‌ 21 ರಂದು ವಿಶ್ವ ಅರಣ್ಯ ದಿನದಂದು 2020,2021 ಮತ್ತು 2022 ಸಾಲಿನ ಪ್ರಶಸ್ತಿಗಳನ್ನು ವಿತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT