ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

World Health Day | ವೈದ್ಯರು, ದಾದಿಯರಿಗೆ ಶುಭ ಕೋರಿದ ಸಿ.ಎಂ ಬೊಮ್ಮಾಯಿ 

Last Updated 7 ಏಪ್ರಿಲ್ 2022, 6:02 IST
ಅಕ್ಷರ ಗಾತ್ರ

ಬೆಂಗಳೂರು: ಇಂದು ವಿಶ್ವ ಆರೋಗ್ಯ ದಿನ (ಏಪ್ರಿಲ್ 7) ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೈದ್ಯರು, ದಾದಿಯರಿಗೆ ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ವಿಶ್ವ ಆರೋಗ್ಯದಿನದ ಶುಭಾಶಯಗಳು. ಉತ್ತಮ ಆರೋಗ್ಯಯುತ ಜೀವನಶೈಲಿ ನಮ್ಮ ಮೊದಲ ಆದ್ಯತೆಯಾಗಲಿ. ಉತ್ತಮ ಆರೋಗ್ಯ ಸೇವೆ ಸಲ್ಲಿಸುತ್ತಿರುವ ವೈದ್ಯರು, ದಾದಿಯರು, ಆರೋಗ್ಯ ಯೋಧರಿಗೆ ಹೃದಯಪೂರ್ವಕ ಕೃತಜ್ಞತೆಗಳು’ ಎಂದು ಪ್ರಕಟಿಸಿದ್ದಾರೆ.

‘ಇಂದು ವಿಶ್ವ ಆರೋಗ್ಯ ದಿನ. ಆರೋಗ್ಯ ಎಂದರೆ ಕೇವಲ ರೋಗ ಮುಕ್ತವಾಗಿರುವುದಲ್ಲ. ಆರೋಗ್ಯ ಎಂದರೆ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಸಧೃಢತೆ. ಈ ವಿಶ್ವ ಆರೋಗ್ಯ ದಿನದಂದು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವ ಸಂಕಲ್ಪ ಮಾಡೋಣ, ಆರೋಗ್ಯ ಭಾಗ್ಯವನ್ನು ನಮ್ಮದಾಗಿಸಿಕೊಳ್ಳೋಣ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

‘ದಿನನಿತ್ಯ ಯೋಗ, ಪ್ರಾಣಾಯಾಮ, ವ್ಯಾಯಾಮ ಮಾಡುವುದು ಹಾಗೂ ಪೌಷ್ಠಿಕ ಆಹಾರ ಸೇವಿಸುವ ಜತೆ ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವ ಮೂಲಕ ದೈಹಿಕ ಹಾಗೂ ಮಾನಸೀಕ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸೋಣ. ಸದೃಢ ಭಾರತ ನಿರ್ಮಾಣಕ್ಕಾಗಿ ಆರೋಗ್ಯವಂತ ಸಮಾಜ ನಿರ್ಮಿಸೋಣ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT