ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಎರಡನೇ ಅಲೆ ಬಗ್ಗೆ ಚರ್ಚೆ ನಾಳೆ

Last Updated 1 ಏಪ್ರಿಲ್ 2021, 17:04 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವ ಆರೋಗ್ಯ ದಿನದ ಪ್ರಯುಕ್ತ ಮಣಿಪಾಲ ಆಸ್ಪತ್ರೆಗಳ ಸಮೂಹವು ಶನಿವಾರ (ಏ.3) ಮಧ್ಯಾಹ್ನ 3.30ಕ್ಕೆ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ದಿ ಸ್ಟರ್ಲಿಂಗ್ ಮ್ಯಾಕ್ ಹೋಟೆಲ್‌ನಲ್ಲಿ ಕೋವಿಡ್ ಎರಡನೇ ಅಲೆ, ಲಸಿಕೆ ಕುರಿತು ವಿಚಾರಸಂಕಿರಣ ಆಯೋಜಿಸಿದೆ.

‘ಪ್ರಜಾವಾಣಿ’ ಮತ್ತು ಡೆಕ್ಕನ್ ಹೆರಾಲ್ಡ್’ ಸಹಯೋಗದಲ್ಲಿ ನಡೆಯಲಿರುವ ಈ ವಿಚಾರಸಂಕಿರಣದ ಅಧ್ಯಕ್ಷತೆಯನ್ನು ಆಸ್ಪತ್ರೆಯ ಶ್ವಾಸಕೋಶಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ ಮೈಸೂರು ಅವರು ವಹಿಸಲಿದ್ದಾರೆ. ಬೆಂಗಳೂರು ಅಪಾರ್ಟ್‌ಮೆಂಟ್ಸ್ ಫೆಡರೇಷನ್‌ನ ಪ್ರಧಾನ ಕಾರ್ಯದರ್ಶಿ ವಿಕ್ರಮ್ ಪೈ, ‘ಐ ಚೇಂಜ್ ಇಂದಿರಾನಗರ’ದ ಕೋವಿಡ್ ಉಸ್ತುವಾರಿ ಸತೀಶ್ ರಾವ್, ಮಣಿಪಾಲ ಹೆಲ್ತ್ ಎಂಟರ್‌ಪ್ರೈಸಸ್‌ ಪ್ರೈ.ಲಿ.ನ ಪ್ರಾದೇಶಿಕ ಮುಖ್ಯ ಕಾರ್ಯಾಚರಣೆ ಅಧಿಕಾರಿ ದೀಪಕ್ ವೇಣುಗೋಪಾಲನ್, ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಯ ನಿರ್ದೇಶಕ ಮನೀಶ್ ರೈ ಹಾಗೂ ವೈಟ್‌ಫೀಲ್ಡ್‌ ಮಣಿಪಾಲ ಆಸ್ಪತ್ರೆಯ ನಿರ್ದೇಶಕ ಅರ್ನಬ್ ಮೊಂಡಾಲ್ ಅವರು ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

‘ಒಟ್ಟಾಗಿ ಸಾಮೂಹಿಕ ಯೋಗಕ್ಷೇಮದ ಕಡೆಗೆ’ ಎಂಬ ಪರಿಕಲ್ಪನೆಯಲ್ಲಿ ಈ ವಿಚಾರಸಂಕಿರಣ ನಡೆಯಲಿದೆ. ಕೋವಿಡ್ ಎರಡನೇ ಅಲೆ ತಡೆಯಲು ಮಾಡಿಕೊಂಡಿರುವ ಸಿದ್ಧತೆಗಳು, ಲಸಿಕೆಯ ಮಹತ್ವ ಸೇರಿದಂತೆ ಕೋವಿಡ್ ತಡೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿಷಯ ತಜ್ಞರು ಮಾತನಾಡಲಿದ್ದಾರೆ. ಈ ಕಾರ್ಯಕ್ರಮವನ್ನು ಆನ್‌ಲೈನ್ ವೇದಿಕೆ ಮೂಲಕವೂ ವೀಕ್ಷಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಜೂಮ್ ಐಡಿ: 995 3918 9243

ಪಾಸ್‌ಕೋಡ್: Health@123

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT