ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಮೋದಿ ಅವರಿಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸೇರಿದಂತೆ ಬಹುತೇಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಆದರೆ ಭದ್ರತಾ ಲೋಪವೊಂದು ಕಂಡು ಬಂದಿದ್ದು, ಯುವಕನೊಬ್ಬ ಬ್ಯಾರಿಕೇಡ್ ದಾಟಿ ಮೋದಿಯವರಿಗೆ ಹಾರ ಹಾಕಲು ಬಂದಿದ್ದಾನೆ.
ಹೌದು.. ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪವಾಗಿದ್ದು, ಬ್ಯಾರಿಕೇಡ್ ಹಾರಿ ಮೋದಿ ಕಾರಿನತ್ತ ನುಗ್ಗಿದ ಯುವಕ ಮೋದಿಗೆ ಹೂವಿನ ಹಾರ ಹಾಕಲು ಯತ್ನಿಸಿದ್ದಾನೆ.
ಇನ್ನೂ ಖುದ್ದು ಮೋದಿ ಕೈಗೆ ಹೂವಿನ ಹಾರ ಕೊಡಲು ಯತ್ನಿಸಿದ್ದು, ಬಳಿಕ ಯುವಕನನ್ನು ಎಳೆದೊಯ್ದಿದ್ದಾರೆ. ಪೊಲೀಸರ ಕರ್ತವ್ಯ ಲೋಪದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.