ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯಸ್’ ಚಂಡಮಾರುತ: ಏಳು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’

Last Updated 25 ಮೇ 2021, 19:11 IST
ಅಕ್ಷರ ಗಾತ್ರ

ಬೆಂಗಳೂರು: ‘ಯಸ್’ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 26ರಂದು ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸೂಚನೆ ಇದೆ. ಈ ವಾರದಲ್ಲಿ ಪೂರ್ವ ಮುಂಗಾರು ಮಳೆ ಸುರಿಯಬಹುದು. ಸದ್ಯ ಚಂಡಮಾರುತದ ಕಾರಣ ಕೆಲ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ ಎಂದು ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬುಧವಾರ (ಮೇ 26) ಭಾರಿ ಮಳೆಯಾಗುವ ಸೂಚನೆಗಳು ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಕರಾವಳಿಯಲ್ಲಿ ಮೇ 29 ಮತ್ತು 30ರಂದು ಭಾರಿ ಮಳೆಯಾಗಲಿದೆ. ಒಳನಾಡಿನಲ್ಲೂ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದೂ ತಿಳಿಸಿದೆ.

ಮಳೆ–ಎಲ್ಲಿ, ಎಷ್ಟು?: ದಾವಣಗೆರೆಯಲ್ಲಿ ಮಂಗಳವಾರ 7 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಯಲ್ಲಾಪುರ 6, ಭಟ್ಕಳ, ಹಾವೇರಿ 3, ಚಿತ್ರದುರ್ಗ 2, ಧರ್ಮಸ್ಥಳ, ಮಂಗಳೂರು, ಆಗುಂಬೆ, ಸೋಮವಾರಪೇಟೆ, ಮಧುಗಿರಿ, ಬೆಂಗಳೂರು, ಶಿರಾ ಹಾಗೂ ಚಳ್ಳಕೆರೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಲಬುರ್ಗಿಯಲ್ಲಿ36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT