ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯಶಸ್ವಿನಿ’ಯಿಂದ ಬಡವರಿಗೆ ನೆರವು -ಸಚಿವ ಅಶ್ವತ್ಥ ನಾರಾಯಣ

Last Updated 21 ಫೆಬ್ರುವರಿ 2023, 21:45 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ‘ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸಿ ಬಡವರಿಗೆ ನೆರವು ನೀಡಲಾಗುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗ ಹಾಗೂ ಮಹಿಳಾ ಸಬಲೀಕರಣದ ಭರವಸೆ ಈಗಾಗಲೇ ಪೂರೈಸಿದ್ದೇವೆ’ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ
ನಾರಾಯಣ ಹೇಳಿದರು.

ರವೀಂದ್ರನಗರದಲ್ಲಿ ನಡೆದ ಕಾರ್ಯ ಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬೆಂಗಳೂರಿನಲ್ಲಿ ಉದ್ಯೋಗ ಇರುವುದಕ್ಕೆ ತಾನೆ ಹೊರರಾಜ್ಯಗಳಿಂದ ಜನರು ಬರುತ್ತಿದ್ದಾರೆ. ಅಂದರೆ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ ಎಂದರ್ಥ. ಬೆಂಗಳೂರಿನಲ್ಲಿ ಎಲ್ಲವೂ ಸುಭಿಕ್ಷವಾಗಿದೆ. ಅದಕ್ಕಾಗಿ ವಲಸಿಗರ ಸಂಖ್ಯೆ ಜಾಸ್ತಿ ಆಗುತ್ತಿದೆ’ ಎಂದರು.

ಮಾಜಿ ಶಾಸಕ ಎಸ್. ಮುನಿರಾಜು ಮಾತನಾಡಿ, ‘ದಾಸರಹಳ್ಳಿ ಕ್ಷೇತ್ರದಾ ದ್ಯಂತ ಅಭಿವೃದ್ಧಿ ಶೂನ್ಯವಾಗಿದೆ. ಎಲ್ಲಿ ನೋಡಿದರೂ ಕಳಪೆ ಕಾಮಗಾರಿ ಎದ್ದು ಕಾಣುತ್ತಿದೆ. ಕ್ಷೇತ್ರಕ್ಕೆ ₹ 886 ಕೋಟಿ ಅನುದಾನ ಬಂದಿದ್ದರೂ ಶಾಸಕ ಮಂಜುನಾಥ್ ಸುಳ್ಳು ಆರೋಪ ಮಾಡುತ್ತಾ ದಾಸರಹಳ್ಳಿ ಜನತೆಯ ಕಿವಿಗೆ ಹೂವು ಇಡುವ ಕೆಲಸ ಮಾಡುತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT