ಶುಕ್ರವಾರ, ಡಿಸೆಂಬರ್ 4, 2020
22 °C

ಯಡಿಯೂರಪ್ಪ, ನಡ್ಡಾ ಸಭೆ ಅಂತ್ಯ: ಸಂಪುಟ ವಿಸ್ತರಣೆ 4 ದಿನಗಳಲ್ಲಿ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸಚಿವ‌ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಕುರಿತು ನಾಲ್ಕು ದಿನಗಳಲ್ಲಿ ಅಂತಿಮ ನಿರ್ಧಾರ‌ ತಿಳಿಸುವುದಾಗಿ ಬಿಜೆಪಿ ಹೈಕಮಾಂಡ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಿಳಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ‌ ಜೆ.ಪಿ.‌ ನಡ್ಡಾ ಅವರೊಂದಿಗೆ ಬುಧವಾರ ಸಂಜೆ ಈ ಕುರಿತು ನಡೆಸಲಾದ ಸಭೆಯ ಬಳಿಕ  ಮಾತನಾಡಿದ ಯಡಿಯೂರಪ್ಪ, ನಾಲ್ಕೈದು ದಿನಗಳಲ್ಲಿನಡ್ಡಾ ಅವರು ಈ ಸಂಬಂಧ ನಿರ್ಧಾರ‌ ತಿಳಿಸುವುದಾಗಿ ಹೇಳಿದರು.

ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ಮುಖಂಡರ ಜೊತೆ ಮಾತುಕತೆ ನಡೆಸಿದ‌ ಬಳಿಕ ಸಂಪುಟಕ್ಕೆ ಸೇರ್ಪಡೆ ಆಗುವವರ‌ ಪಟ್ಟಿಯನ್ನು ಕಳುಹಿಸಿಕೊಡುವುದಾಗಿ ನಡ್ಡಾ ತಿಳಿಸಿದ್ದಾರೆ ಎಂದು ಅವರು ಹೇಳಿದರು.

ಕೇಂದ್ರದ ಗೃಹ ಸಚಿವ ಅಮಿತ್ ‌ಶಾ ಅವರ ಭೇಟಿಗೆ ಯಡಿಯೂರಪ್ಪ ಪ್ರಯತ್ನಿಸಿದರಾದರೂ ಅವಕಾಶ‌ ಸಿಗಲಿಲ್ಲ ಎನ್ನಲಾಗಿದೆ.

ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಯಡಿಯೂರಪ್ಪ ಒಲವು ತೋರಿದ್ದು, ಹೈಕಮಾಂಡ್ ಅದಕ್ಕೆ ಒಲವು ತೋರಿಲ್ಲ ಎನ್ನಲಾಗಿದೆ.

ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ದೆಹಲಿಯಲ್ಲಿದ್ದರೂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು