ಗುರುವಾರ , ಸೆಪ್ಟೆಂಬರ್ 23, 2021
22 °C

ಯಡಿಯೂರಪ್ಪ ರಾಜೀನಾಮೆ ಕೊಡಿಸುವ ಅಗತ್ಯ ಈಗ ಇತ್ತೇ: ಲಕ್ಷ್ಮಿ ಹೆಬ್ಬಾಳಕರ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಬಿ.ಎಸ್. ಯಡಿಯೂರಪ್ಪ ಅವರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸುವ ಅಗತ್ಯ ಈಗ ಇತ್ತೇ ಎಂದು ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಕೆಪಿಸಿಸಿ ವಕ್ತಾರೆಯೂ ಆಗಿರುವ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಇಲ್ಲಿ ಮಾಧ್ಯಮ ‍ಪ್ರತಿನಿಧಿಗಳೊಂದಿಗೆ ಸೋಮವಾರ ಮಾತನಾಡಿದ ಅವರು, ‘ಯಡಿಯೂರಪ್ಪ ಪಕ್ಷಾತೀತ ಲೆಜೆಂಡ್ ನಾಯಕ. ದುಃಖದಿಂದ ರಾಜೀನಾಮೆ ನೀಡುವ ಪ್ರಸಂಗ ಅವರಿಗೆ ಬರಬಾರದಿತ್ತು. ಆಡಳಿತದ ಮೇಲೆ ಇದರಿಂದ ಪರಿಣಾಮ ಆಗುತ್ತದೆ ಎನ್ನುವುದನ್ನು ಬಿಜೆಪಿ ಹೈಕಮಾಂಡ್ ಅರಿಯಬೇಕಿತ್ತು’ ಎಂದು  ಅಭಿಪ್ರಾಯಪಟ್ಟರು.

‘ಯಡಿಯೂರಪ್ಪ ಅವರು ನಡೆಸಿದ ಹೋರಾಟ, ಅವರಿಗಿದ್ದ ಧೈರ್ಯದ ಬಗ್ಗೆ ಅಭಿಮಾನ ಇದೆ. ಅಧಿಕಾರದ ಅವಧಿ ಪೂರ್ಣಗೊಳಿಸಲು ಅವಕಾಶ ಇರಬೇಕಿತ್ತು ಎನ್ನುವುದು ನನ್ನ ಅನಿಸಿಕೆ’ ಎಂದರು.

‘ಅವರಿಗೆ ರಾಜಕೀಯದಲ್ಲಿ ಸುದೀರ್ಘ 50 ವರ್ಷಗಳ ಅನುಭವ ಇದೆ. ಇಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಮತ್ತು ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಆ ಪಕ್ಷವನ್ನು ಅಧಿಕಾರಕ್ಕೆ ತಂದ ನಾಯಕ. ಇಂತಹ ದೊಡ್ಡ ವ್ಯಕ್ತಿಯ ಆಡಳಿತದ ಯುಗ ಅಂತ್ಯವಾಯಿತೇನೋ ಎಂದು ಅವರು ಭಾವುಕವಾಗಿ ಮಾತನಾಡಿದ್ದನ್ನು ನೋಡಿದಾಗ ಅನಿಸಿತು’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಕೋವಿಡ್ ಹಾವಳಿ ಮತ್ತು ಪ್ರವಾಹ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ರಾಜಕೀಯ ಬೆಳವಣಿಗೆ ಸರಿಯಲ್ಲ. ಜನರ ಕಾಳಜಿಗಿಂತ ರಾಜಕೀಯವೇ ಮುಖ್ಯವಾಗಿದ್ದು ಸರಿಯಲ್ಲ. ಆಡಳಿತಕ್ಕಿಂತ ಬಿಜೆಪಿಗೆ ರಾಜಕೀಯವೇ ಮುಖ್ಯವಾಗಿದೆ’ ಎಂದು ಟೀಕಿಸಿದರು.

ಇವನ್ನೂ ಓದಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು