ಮಂಗಳವಾರ, ಸೆಪ್ಟೆಂಬರ್ 21, 2021
28 °C

ನಾನು ಲಾಬಿ ಮಾಡಿ ಮುಖ್ಯಮಂತ್ರಿ ಅನಿಸಿಕೊಳ್ಳುವುದಿಲ್ಲ: ಸಚಿವ ಮುರುಗೇಶ ನಿರಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: 'ರಾಜ್ಯದಲ್ಲಿ 120 ಶಾಸಕರಿದ್ದೇವೆ. ಎಲ್ಲರೂ ಮುಖ್ಯಮಂತ್ರಿ ಆಗುವುದಕ್ಕೆ  ಸಮರ್ಥರಿದ್ದಾರೆ. ಆದರೆ ನಾನು ಲಾಬಿ ಮಾಡಿ ಸಿ.ಎಂ. ಅನಿಸಿಕೊಳ್ಳಲು ಇಷ್ಟಪಡುವುದಿಲ್ಲ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ಕಲಬುರ್ಗಿಯಲ್ಲಿ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, 'ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡಲಾರೆ. ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ' ಎಂದರು.

'ನಾನು ವಾರಾಣಸಿಗೆ ಹೋಗಿದ್ದು ದೇವರ ದರ್ಶನ‌ ಮಾಡುವುದಕ್ಕೆ ಅಷ್ಟೆ. ಪ್ರತಿ ತಿಂಗಳು ಒಂದೊಂದು ದೇವಸ್ಥಾನಕ್ಕೆ ಹೋಗಿ ಬರುವುದು ನನ್ನ ರೂಢಿ. ಸದ್ಯ ಕಲಬುರ್ಗಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ನಾನು ಅದನ್ನು ನಿರ್ವಹಿಸುತ್ತೇನೆ' ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು