ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ಅವರನ್ನು ಹೆದರಿಸಿ ರಾಜೀನಾಮೆ ಪಡೆದಿದ್ದಾರೆ: ಸಿದ್ದರಾಮಯ್ಯ

Last Updated 26 ಜುಲೈ 2021, 16:16 IST
ಅಕ್ಷರ ಗಾತ್ರ

ಬೆಳಗಾವಿ: ‘ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್‌ನವರು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ಇಲ್ಲಿನ ಪ್ರವಾಸಿಮಂದಿರದಲ್ಲಿ ಸೋಮವಾರರಾತ್ರಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ’ ಎಂದರು.

‘2019ರಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ಮುಖ್ಯಮಂತ್ರಿಯೇ ರಾಜೀನಾಮೆ ನೀಡಿದ್ದಾರೆ. ಇದು ಕರ್ನಾಟಕದ ದುರ್ದೈವವೆ ಸರಿ. ಯಡಿಯೂರಪ್ಪ ಕೇರ್‌ ಟೇಕರ್‌ ಮುಖ್ಯಮಂತ್ರಿಯಾಗಿದ್ದಾರೆ. ಈಗ ಮಂತ್ರಿಮಂಡಲವೇ ಇಲ್ಲ. ಸ್ವಲ್ಪ ದಿನ ಕಾದು ಬಳಿಕ ರಾಜೀನಾಮೆ ಪಡೆಯಬೇಕಿತ್ತು. ಪ್ರವಾಹದ ಸಂದರ್ಭದಲ್ಲಿ ಕೊಡಿಸಿದ್ದು ಸರಿಯಲ್ಲ’ ಎಂದು ತಿಳಿಸಿದರು.

‘ನೆರೆ ಬಂದಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಪ್ರವಾಹವೇ ಬಂದಿಲ್ಲ ಎನ್ನುವ ಸಚಿವರದು ಬೇಜವಾಬ್ದಾರಿ ಹೇಳಿಕೆ. ಹಾಗಿದ್ದರೆ ಮುಖ್ಯಮಂತ್ರಿ ಇಲ್ಲಿಗೇಕೆ ಬಂದಿದ್ದರು. ಶೋಕಿ ಮಾಡಲು ಬಂದಿದ್ದರಾ? ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಿದ್ದೇನೆ ಎನ್ನುವಾಗ ಕಾಟಾಚಾರಕ್ಕೆಂದು ಇಲ್ಲಿ ಪ್ರವಾಸ ಕೈಗೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT