ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಡಿ ಪ್ರಕರಣದ ಯುವತಿ ಸದ್ಯದಲ್ಲೇ ನ್ಯಾಯಾಲಯಕ್ಕೆ: ವಕೀಲ

Last Updated 29 ಮಾರ್ಚ್ 2021, 7:52 IST
ಅಕ್ಷರ ಗಾತ್ರ

ಬೆಂಗಳೂರು: ಸಿ.ಡಿ ಪ್ರಕರಣದ ಯುವತಿ ಸದ್ಯದಲ್ಲೇ ನಗರದ ನ್ಯಾಯಾಲಯಕ್ಕೆ ಹಾಜರಾಗಲಿದ್ದು, ಅದಕ್ಕೆ ಬೇಕಾದ ತಯಾರಿಯನ್ನು ಯುವತಿ‌ ಪರ ವಕೀಲರು ಮಾಡುತ್ತಿದ್ದಾರೆ.

ಯುವತಿ ಪರ‌ ವಕೀಲರು, ಮ್ಯಾಜಿಸ್ಟ್ರೇಟ್ ಕೊರ್ಟ್‌ನ ಉಪ ರಿಜಿಸ್ಟ್ರಾರ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.

'ಬೆಂಗಳೂರು ಹೊರವಲಯದಲ್ಲಿ ‌ಯುವತಿ‌ ಇದ್ದಾರೆ. ನ್ಯಾಯಾಧೀಶರ ಎದುರು ಸ್ವ-ಇಚ್ಛಾ ಹೇಳಿಕೆ ನೀಡಲು ಬಯಸಿದ್ದಾರೆ. ಅನುಮತಿ ನೀಡಿ' ಎಂದು ಯುವತಿ ಪರ ವಕೀಲರು ಕೋರಿದ್ದಾರೆ.

ಅರ್ಜಿ ಪರಿಶೀಲನೆ ನಡೆಯುತ್ತಿದೆ. ಒಪ್ಪಿಗೆ ಸಿಕ್ಕ ತಕ್ಷಣವೇ ವಕೀಲರ ತಂಡದೊಂದಿಗೆ ಯುವತಿ ನ್ಯಾಯಾಲಯಕ್ಕೆ ಬರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT