ಶುಕ್ರವಾರ, ಆಗಸ್ಟ್ 19, 2022
22 °C

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವಕನ ಮೇಲೆ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಇಲ್ಲಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಅನ್ಯ ಧರ್ಮದ ಯುವತಿಯ ಜೊತೆಗೆ
ಪ್ರಯಾಣಿಸುತ್ತಿದ್ದ ಯುವಕನ ಮೇಲೆ ಕೆಲ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ. ಈ ಸಂಬಂಧ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ಗುರುವಾರ ರಾತ್ರಿ ನಗರದ ಪಂಪ್‌ವೆಲ್ ಬಳಿ ಈ ಘಟನೆ ನಡೆದಿದೆ. ಬೈಕಂಪಾಡಿ -ಜೋಕಟ್ಟೆ ನಿವಾಸಿ ಅಸ್ವಿದ್ ಅನ್ವರ್ ಮುಹಮ್ಮದ್ ಹಲ್ಲೆಗೆ ಒಳಗಾದವರು. ರಾತ್ರಿ ಬಸ್‌ ತಡೆದು ನಿಲ್ಲಿಸಿದ ನಾಲ್ಕೈದು ಮಂದಿಯ ತಂಡ ಯುವಕನನ್ನು ಬಸ್‌ನಿಂದ ಹೊರಗೆಳೆದು ಹಲ್ಲೆ ನಡೆಸಿದ್ದು, ಚೂರಿಯಿಂದ ಇರಿಯಲಾಗಿದೆ.

ಹಲ್ಲೆಗೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಜೊತೆ ಯುವತಿಯೊಬ್ಬಳಿದ್ದು, ಆಕೆಯನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ.

ಬಂಧನಕ್ಕೆ ಕ್ರಮ: ‘ನಗರದ ಪಂಪ್‌ವೆಲ್ ಬಳಿ ಯುವಕನ ಮೇಲೆ ಹಲ್ಲೆ ನಡೆದಿದ್ದು, ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗಿದ್ದ ಯುವತಿಯನ್ನು ಮನೆಗೆ ಕಳುಹಿಸಲಾಗಿದೆ. ಹಲ್ಲೆಗೆ ಸಂಬಂಧಿಸಿದಂತೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಸಿಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಎಲ್ಲ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್‌ ಎನ್.ಶಶಿಕುಮಾರ್‍ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.