ಶುಕ್ರವಾರ, ಜೂನ್ 18, 2021
21 °C

ಬಿಜೆಪಿ ದೂಷಣೆ ಸರಿಯಲ್ಲ: ಗಣೇಶ್ ಕಾರ್ಣಿಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ ರೋಗಿಗಳಿಗೆ ಔಷಧಿ ಮತ್ತು ಇತರ ಸೌಲಭ್ಯಗಳ ಅಕ್ರಮ ವಿತರಣೆಯ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಆದೇಶದಂತೆ ಪೊಲೀಸರು ಯುವ ಕಾಂಗ್ರೆಸ್‌ ಮುಖಂಡ ಬಿ.ವಿ. ಶ್ರೀನಿವಾಸ್‌ ಅವರ ವಿಚಾರಣೆ ನಡೆಸಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯನ್ನು ದೂಷಿಸುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಗಣೇಶ್ ಕಾರ್ಣಿಕ್‌ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಹೈಕೋರ್ಟ್‌ ಆದೇಶದಂತೆ ದೆಹಲಿ ಪೊಲೀಸರು ಬಿ.ವಿ. ಶ್ರೀನಿವಾಸ್‌ ಅವರಲ್ಲದೇ ಬಿಜೆಪಿ ಸಂಸದ ಗೌತಮ್‌ ಗಂಭೀರ್‌ ಹಾಗೂ ಆಮ್‌ ಆದ್ಮಿ ಪಕ್ಷದ ಮುಖಂಡ ದಿಲೀಪ್‌ ಪಾಂಡೆ ಅವರನ್ನೂ ವಿಚಾರಣೆ ನಡೆಸಿದ್ದಾರೆ. ಆದರೆ, ಶ್ರೀನಿವಾಸ್‌ ವಿಚಾರಣೆಯ ವಿಷಯದಲ್ಲಿ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ’ ಎಂದಿದ್ದಾರೆ.

ಕೋವಿಡ್‌ ಔಷಧಿ ಮತ್ತು ಇತರ ಸೌಲಭ್ಯಗಳ ಅಕ್ರಮ ವಿತರಣೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವುದಾಗಿ ದೆಹಲಿ ಪೊಲೀಸ್‌ ಅಪರಾಧ ಪತ್ತೆ ಘಟಕ ಈಗಾಗಲೇ ಸ್ಪಷ್ಟಪಡಿಸಿದೆ. ನ್ಯಾಯಾಲಯದ ಆದೇಶದಂತೆ ಸಮಗ್ರ ತನಿಖೆ ನಡೆಸುವಂತೆ ದೆಹಲಿ ಪೊಲೀಸ್‌ ಕಮಿಷನರ್‌ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.