ಸೋಮವಾರ, ಆಗಸ್ಟ್ 2, 2021
26 °C
ಎದುರಾಳಿಗಳ ತಂತ್ರಕ್ಕೆ ನಾವು ಬಲಿಯಾಗುವುದು ಬೇಡ

ಜೆಡಿಎಸ್ ಕಾರ್ಯಕರ್ತರಿಗೆ ಪತ್ರ ಬರೆದ ವೈಎಸ್ವಿ ದತ್ತಾ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಜೆಡಿಎಸ್ ಕಾರ್ಯಕರ್ತರು ತಾಳ್ಮೆ ಕಾಪಾಡಿಕೊಳ್ಳಬೇಕು ಎಂದು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್ವಿ ದತ್ತಾ ಮನವಿ ಮಾಡಿದ್ದಾರೆ.

ಕಾರ್ಯಕರ್ತರಿಗೆ ಬರೆದಿರುವ ಪತ್ರವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಅವರು, ‘ಅನಗತ್ಯವಾಗಿ ನಮ್ಮನ್ನು ಪ್ರಚೋದಿಸಿ ಕೆರಳಿಸಿ, ನಮ್ಮಿಂದಲೇ ನಮ್ಮ ಪಕ್ಷದ ವರ್ಚಸ್ಸು ಕಡಿಮೆಯಾಗುವಂತಹ ನಮ್ಮ ಎದುರಾಳಿಗಳ ತಂತ್ರಕ್ಕೆ ನಾವು ಬಲಿಯಾಗದಂತೆ ಸ್ವಯಂ ಸಹನೆ ಹಾಗೂ ಸಂಯಮವನ್ನು ತೋರಿಸುವುದು ಈ ಘಳಿಗೆಯ ನಮ್ಮೆಲ್ಲರ ಕರ್ತವ್ಯವಾಗಿದೆ’ ಎಂದು ಮನವಿ ಮಾಡಿದ್ದಾರೆ.

‘ಇಂತಹ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೇ ಪಕ್ಷದ ಮುಂದಿನ ಭವಿಷ್ಯದ ಬಗ್ಗೆ ನಾವು ತಣ್ಣಗೇ ಚಂತಿಸಬೇಕಾಗುತ್ತದೆ’ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

‘ರಾಜ್ಯ ಮತ್ತು ಕೇಂದ್ರದಲ್ಲಿನ ಬಿಜೆಪಿ ಸರ್ಕಾರಗಳ ವೈಪಲ್ಯದಿಂದ ಜನ ತತ್ತರಿಸಿದ್ದಾರೆ. ಹೀಗಾಗಿ ನಾವು ವಿಷಯಾಂತರ ಮಾಡದೇ ಜನಪರವಾಗಿ ಹೋರಾಟದ ಕಡೆಗೆ ಚಿಂತಿಸೋಣ’ ಎಂದು ದತ್ತಾ ಕರೆ ನೀಡಿದ್ದಾರೆ.

 

ಎಚ್.ಡಿ.ಕೆ ವಿರುದ್ಧ ಟೀಕೆ ಮಾಡಿದ್ದಕ್ಕೆ ಸುಮಲತಾ ಹಾಗೂ ರಾಕ್ಲೈನ್ ವೆಂಕಟೇಶ್ ಅವರ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ರಾಕ್ ಲೈನ್ ವೆಂಕಟೇಶ್ ಮನೆಗೆ ಜೆಡಿಎಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು