ಸೋಮವಾರ, ಆಗಸ್ಟ್ 2, 2021
19 °C

8 ಜಿಲ್ಲೆಗಳಲ್ಲಿ ‘ಮಿಷನ್ ಯುವ ಸಮೃದ್ಧಿ’ : ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘2025ರ ವೇಳೆಗೆ ಕೌಶಲ ಮತ್ತು ಉದ್ಯಮಶೀಲತೆ ವಲಯದಲ್ಲಿ 10 ದಶಲಕ್ಷ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುವ ಗುರಿಯೊಂದಿಗೆ ಸರ್ಕಾರ ಅತಿದೊಡ್ಡ ಹೆಜ್ಜೆ ಇಟ್ಟಿದೆ’ ಎಂದು ಕೌಶಲಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

‘ಕೌಶಲ ಮತ್ತು ಉದ್ಯಮಶೀಲತೆ’ ಕಾರ್ಯಪಡೆಯ ಸಭೆಯ ಬಳಿಕ ಮಾತನಾಡಿದ ಅವರು, ‘ಈ ಯೋಜನೆಯನ್ನು ಆದ್ಯತೆಯ ಮೇರೆಗೆ ಜಾರಿಗೆ ತರುವ ಉದ್ದೇಶದಿಂದ ಜುಲೈ 15ರೊಳಗೆ ಕಾರ್ಯಯೋಜನೆಯ ವರದಿ ಸಲ್ಲಿಸುವಂತೆ ಕಾರ್ಯಪಡೆಗೆ ಸೂಚಿಸಲಾಗಿದೆ’ ಎಂದರು.

‘ಕೋವಿಡ್‌ ಸಂಕಷ್ಟದಿಂದ ಆರ್ಥಿಕ ಅವಕಾಶಗಳು, ಉದ್ಯೋಗ ಸರಪಳಿಯ ಮೇಲೆ ಮಾರಕ ಪರಿಣಾಮ ಬೀರಿದೆ. ಇದಕ್ಕೆ ಚೇತರಿಕೆ ನೀಡಲು ‘ಮಿಷನ್‌ ಯುವ ಸಮೃದ್ಧಿ’ ಹೆಸರಿನಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ. ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಮೈಸೂರು, ದಕ್ಷಿಣ ಕನ್ನಡ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಯಚೂರು, ಕೊಪ್ಪಳ, ಧಾರವಾಡ ಈ ಎಂಟು ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುವುದು’ ಎಂದರು.

ಕಾರ್ಯಪಡೆಯ ಅಧ್ಯಕ್ಷ ಹಾಗೂ ಕೌಶಲಾವೃದ್ಧಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್‌, ಕೌಶಲ-ಉದ್ಯಮಶೀಲತೆ ಕಾರ್ಯಪಡೆಯ ಸಹ ಸಂಚಾಲಕರೂ ಆಗಿರುವ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್‌, ಉದ್ಯಮಿ ಮದನ್‌ ಪದಕಿ (ಒನ್‌ ಬ್ರಿಡ್ಜ್ ಕಂಪನಿ ಸಿಇಒ), ಮುಖ್ಯಮಂತ್ರಿಯ ಸಲಹೆಗಾರ ಹಾಗೂ ವಿಷನ್‌ ಗ್ರೂಪ್‌ ಚೇರ್ಮನ್‌ ಪ್ರಶಾಂತ್‌ ಪ್ರಕಾಶ್‌ ಸಭೆಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು