ಶನಿವಾರ, ಫೆಬ್ರವರಿ 4, 2023
17 °C

ಜಮೀರ್‌ಗೆ ಏನು ಮಾರ್ಗದರ್ಶನ ಮಾಡಿದ್ದೀರಿ: ಡಿಕೆಶಿಗೆ ಬಿಜೆಪಿ ಪ್ರಶ್ನೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್‌ಗೆ ಏನು ಮಾರ್ಗದರ್ಶನ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಬಿಜೆಪಿ ಪ್ರಶ್ನಿಸಿದೆ.

ಶಿವಾಜಿನಗರ ವ್ಯಾಪ್ತಿಯ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಜಮೀರ್ ಅವರ ಮನೆ, ಚಾಮರಾಜಪೇಟೆಯಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಜಮೀರ್ ಒಡೆತನದ ಫ್ಲ್ಯಾಟ್ ಸೇರಿದಂತೆ ಹಲವು ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಕಳೆದ ಗುರುವಾರ ದಾಳಿ ಮಾಡಿದ್ದರು.

ಆ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್‌ ಅವರು ಮಂಗಳವಾರ ಜಮೀರ್ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿದ್ದರು.

ಡಿಕೆಶಿ ಮತ್ತು ಜಮೀರ್‌ ನಡುವಿನ ಭೇಟಿಯ ಬಗ್ಗೆ ಟ್ವೀಟ್‌ ಮೂಲಕ ವ್ಯಂಗ್ಯವಾಡಿರುವ ಬಿಜೆಪಿ, 'ಕಪ್ಪು ಹಣ ಸಂಗ್ರಹ, ತೆರಿಗೆ ವಂಚನೆ ಪ್ರಕರಣದ ಆರೋಪಿಗೆ ಏನು ಮಾರ್ಗದರ್ಶನ ಮಾಡಿದ್ದೀರಿ' ಎಂದು ಪ್ರಶ್ನಿಸಿದೆ.

'ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಡೆ ಇರುವ ಕೆಪಿಸಿಸಿ ಭ್ರಷ್ಟಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೇ, ಮಾರ್ಗದರ್ಶನ ಮಾಡುವುದಕ್ಕೆ ಜಮೀರ್‌ ಅವರೇನು ದೇಶದ ಗಡಿ ಕಾಯುವುದಕ್ಕೆ ಹೊರಟಿದ್ದಾರೆಯೇ' ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು