ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಮೀರ್‌ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ’-ಡಿ.ಕೆ.ಶಿವಕುಮಾರ್‌

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ
Last Updated 11 ಜೂನ್ 2021, 18:05 IST
ಅಕ್ಷರ ಗಾತ್ರ

ಬೆಂಗಳೂರು: ‘ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಕುರಿತು ಶಾಸಕ ಬಿ.ಜೆಡ್‌. ಜಮೀರ್‌ ಅಹಮ್ಮದ್ ಖಾನ್‌ ನೀಡಿರುವ ಹೇಳಿಕೆ ವೈಯಕ್ತಿಕವಾದುದು. ಅವರ ಹೇಳಿಕೆಗೂ ಕಾಂಗ್ರೆಸ್‌ ಪಕ್ಷಕ್ಕೂ ಸಂಬಂಧವಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಜಮೀರ್‌ ಅಹಮ್ಮದ್ ಅವರ ಹೇಳಿಕೆ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಶಿವಕುಮಾರ್‌, ‘ಜಮೀರ್‌ ಅಹಮ್ಮದ್ ಅವರು ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆ ನೀಡುವ ಮೊದಲು ತಾವು ಒಂದು ಪಕ್ಷದ ಪ್ರತಿನಿಧಿ ಎಂಬುದನ್ನು ಮರೆಯಬಾರದು. ಇಂತಹ ಘಟನೆ ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದ್ದಾರೆ.

ಪಕ್ಷದ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಇತರರನ್ನು ಟೀಕಿಸುವಾಗ ಎಚ್ಚರಿಕೆಯಿಂದ ಇರಬೇಕು. ಜಾತಿ, ಧರ್ಮ ಸೇರಿದಂತೆ ಯಾವುದೇ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆ ನೀಡಬಾರದು. ಟೀಕಿಸುವ ಭರದಲ್ಲಿ ಗೌರವದ ಎಲ್ಲೆ ಮೀರಬಾರದು. ವೈಯಕ್ತಿಕ ವಿಚಾರಗಳನ್ನು ಪ್ರಸ್ತಾಪಿಸಬಾರದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT