ಅಭಿವೃದ್ಧಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ಸೇನೆ ಪ್ರತಿಭಟನೆ

ಭಾನುವಾರ, ಜೂನ್ 16, 2019
28 °C

ಅಭಿವೃದ್ಧಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ಸೇನೆ ಪ್ರತಿಭಟನೆ

Published:
Updated:
Prajavani

ಚಾಮರಾಜನಗರ: ಜಿಲ್ಲಾ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ಸೇನೆಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮಾರ್ಗವಾಗಿ ಜಿಲ್ಲಾಡಳಿತ ಭವನಕ್ಕೆ ತೆರಳಿ ಶಿರಸ್ತೇದಾರರಾದ ಅನುಷಾ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್, ಎಕ್ಸ್‌ರೇಗೆ ಹೊರಗಡೆ ಬರೆಯುತ್ತಿದ್ದಾರೆ. ಜನರಿಕ್ ಜನೌಷಧ ಮಳಿಗೆ ಶೀಘ್ರವೇ ತೆರೆಯಬೇಕು. ಸರ್ಕಾರಿ ವೈದ್ಯರು ಖಾಸಗಿ ಕ್ಲಿನಿಕ್ ಇಟ್ಟುಕೊಂಡಿದ್ದಾರೆ. ಅಲ್ಲದೆ, ಸಣ್ಣ ಪುಟ್ಟ ಅಪರೇಷನ್‌ಗೂ ಖಾಸಗಿ ಆಸ್ಪತ್ರೆಗಳಿಗೆ ಬರೆಯುತ್ತಿದ್ದಾರೆ. ಇಂತಹ ವೈದ್ಯರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಗರದಲ್ಲಿ ಯುಜಿಡಿ ಕಾಮಗಾರಿ ಸ್ಥಗಿತಗೊಂಡಿದೆ. ವಾರ್ಡ್‌ಗಳಲ್ಲಿನ ಅವೈಜ್ಞಾನಿಕ ಒಳಚರಂಡಿ ಕಾಮಗಾರಿಯಿಂದ ಕೊಳಚೆ ನೀರು ಹೊರಬರುತ್ತಿದೆ. ಇದರಿಂದ ರೋಗ ರುಜಿನಗಳು ಹರಡು ಸಾಧ್ಯತೆ ಇದ್ದು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಗೆ ಅಗತ್ಯಕ್ರಮ ಕೈಗೊಳ್ಳಬೇಕು. ಖಾಸಗಿ ಶಾಲೆಗಳಲ್ಲಿ ಪಠ್ಯಪುಸ್ತಕಗಳು ಮತ್ತು ನೋಟ್‌ಪುಸ್ತಕ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದನ್ನು ತಪ್ಪಿಸಬೇಕು.

ಡೊನೇಷನ್ ಹಾವಳಿ ಹೆಚ್ಚಾಗಿದೆ. ಹೆಚ್ಚುವರಿ ಶುಲ್ಕ ಪಡೆಯುವ ಶಾಲೆಗಳ ವಿರುದ್ಧ ಕ್ರಮವಹಿಸಬೇಕು. ಅಂಗಡಿಗಳು, ಸರ್ಕಾರಿ ಕಚೇರಿಗಳು ಹಾಗೂ ಬ್ಯಾಂಕ್‌ಗಳಲ್ಲಿ ಇನ್ನಿತರ ಖಾಸಗಿ ಸಂಸ್ಥೆಗಳಲ್ಲಿ ನಗರಸಭೆಯ ವಾರ್ಡ್‌ಗಳಲ್ಲಿ ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಬರೆಸಬೇಕು ಎಂದು ಒತ್ತಾಯಿಸಿದರು.

ಜೋಡಿರಸ್ತೆ, ನ್ಯಾಯಾಲಯ ರಸ್ತೆಗಳಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು. ದೊಡ್ಡರಸನ ಕೊಳದ ಅಭಿವೃದ್ಧಿಪಡಿಸಬೇಕು.

ನ್ಯಾಯಾಲಯ ರಸ್ತೆಯಲ್ಲಿರುವ ಭಾರತ್‌ ಗ್ಯಾಸ್ ಗೋಡೊನ್‌ ಸ್ಥಳಾಂತರಿಸಬೇಕು. ಕಾರ್ಮಿಕ ಇಲಾಖೆಯಲ್ಲಿ ಕಟ್ಟಡ ಕಾರ್ಮಿಕರಲ್ಲದವರಿಗೆ ಕೂಲಿ ಕಾರ್ಮಿಕ ಕಾರ್ಡ್‌ಗಳನ್ನು ನೀಡಿ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕ್ಯಾಮೆರ ಅಳವಡಿಸಬೇಕು. ಜಿಲ್ಲೆಯ ಕೆರೆಗಳ ಒತ್ತುವರಿ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಕ್ಷಣಾ ಸೇನೆಯ ಜಿಲ್ಲಾಧ್ಯಕ್ಷ ಮಿಂಚು ನಾಗೇಂದ್ರ, ಉಪಾಧ್ಯಕ್ಷ ಗುರುಪ್ರಸಾದ್, ಪ್ರಧಾನ ಕಾರ್ಯದರ್ಶಿ ಸಿ.ಎನ್.ರುದ್ರ, ತಾಲ್ಲೂಕು ಅಧ್ಯಕ್ಷ ಸಿ.ಡಿ.ಪ್ರಕಾಶ್, ಉಪಾಧ್ಯಕ್ಷ ಕೂಸಣ್ಣ, ಟೌನ್ ಅಧ್ಯಕ್ಷ ಶಿವಕುಮಾರ್, ಎಚ್.ಪಿ.ಪ್ರಭುಸ್ವಾಮಿ ಪಾಲ್ಗೊಂಡಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !