ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಕ್ಷಿಪಣಿ ಪರೀಕ್ಷೆಯ ಮೇಲ್ವಿಚಾರಣೆ ನಡೆಸಿದ ಕಿಮ್‌

ಎಪಿ Updated:

ಅಕ್ಷರ ಗಾತ್ರ : | |

Prajavani

ಸೋಲ್: ಉತ್ತರ ಕೊರಿಯಾವು ಶನಿವಾರ ಖಂಡಾತರ ಕ್ಷಿಪಣಿ ಪರೀಕ್ಷೆ ನಡೆಸಿದ್ದು, ಅಧ್ಯಕ್ಷ  ಕಿಮ್‌ ಜಾಂಗ್‌ ಉನ್‌ ಅವರು ಮೇಲ್ವಿಚಾರಣೆ ನಡೆಸಿದ್ದಾರೆ ಎಂದು ಅಲ್ಲಿನ ಸರ್ಕಾರಿ ಸ್ವಾಮ್ಯದ ಮಾಧ್ಯಮ ವರದಿ ಮಾಡಿದೆ.

ಕಿಮ್‌ ಅವರು ಕ್ಷಿಪಣಿ ಪರೀಕ್ಷೆಯ ಮೇಲ್ವಿಚಾರಣೆ ನಡೆಸುತ್ತಿರುವ ಚಿತ್ರ ಕೂಡ ಮಾಧ್ಯಮದಲ್ಲಿ ಪ್ರಕಟಗೊಂಡಿದೆ.

ಉತ್ತರ ಕೊರಿಯಾ ಮತ್ತೆ ಖಂಡಾತರ ಕ್ಷಿಪಣಿ ಪರೀಕ್ಷೆ ನಡೆಸಿದೆ ಎಂದು ದಕ್ಷಿಣ ಕೊರಿಯಾ ಆತಂಕ ವ್ಯಕ್ತಪಡಿಸಿದ ಮರುದಿನ ಮಾಧ್ಯಮದಲ್ಲಿ ಈ ವರದಿ ಪ್ರಕಟಗೊಂಡಿದೆ.

ಶನಿವಾರ ನಡೆದ ಕ್ಷಿಪಣೆ ಪರೀಕ್ಷೆ ಕವಾಯತಿನ ಬಗ್ಗೆ ಕಿಮ್‌ ಅವರು ’ತೃಪ್ತಿ‘ ವ್ಯಕ್ತಪಡಿಸಿದ್ದಾರೆ ಎಂದೂ ಹೇಳಿದೆ.

ಸೇನೆಯು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿದೆ ಎಂದು ಕಿಮ್‌ ಹೇಳಿರುವುದಾಗಿಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಎರಡು ದೇಶಗಳ ನಡುವಿನ ಉದ್ವಿಗ್ನ ಸ್ಥಿತಿ ಶಮನಕ್ಕೆ ಮಾಡಿಕೊಂಡಿರುವ ಒಪ್ಪಂದವನ್ನು ಉತ್ತರಕೊರಿಯಾ ಉಲ್ಲಂಘಿಸಿದೆ ಎಂದು ದಕ್ಷಿಣ ಕೊರಿಯಾ ಆರೋಪಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು