ಜನಾಭಿಪ್ರಾಯ ಸಂಗ್ರಹ: ದಿನೇಶ್‌

7
ಲೋಕಸಭೆ ಚುನಾವಣಾ ಪ್ರಣಾಳಿಕೆಗೆ ಸಿದ್ಧತೆ

ಜನಾಭಿಪ್ರಾಯ ಸಂಗ್ರಹ: ದಿನೇಶ್‌

Published:
Updated:
Deccan Herald

ಬೆಂಗಳೂರು: ‘ದೇಶ ಸುತ್ತಿ‌, ಜನಾಭಿಪ್ರಾಯ ಸಂಗ್ರಹಿಸಿದ ಬಳಿಕ ಲೋಕಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಬೇಕು ಎಂದು ರಾಹುಲ್ ಗಾಂಧಿ ಸೂಚಿಸಿದ್ದಾರೆ. ಅದರಂತೆ, ಆ ನಿಟ್ಟಿನಲ್ಲಿ ವಿಶೇಷ ಗಮನ ಕೊಟ್ಟಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಈಗಾಗಲೇ ವಿವಿಧ ಕ್ಷೇತ್ರಗಳ ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದೇವೆ. ಸೋಮವಾರ ನಡೆದ ಚರ್ಚೆಯಲ್ಲಿ ಸುಮಾರು 70 ಮಂದಿ ಭಾಗವಹಿಸಿದ್ದರು’ ಎಂದರು.

‘ಆಹಾರ ಭದ್ರತಾ ಕಾಯ್ದೆ, ಆರೋಗ್ಯ ಕ್ಷೇತ್ರದ ಖಾಸಗೀಕರಣ, ಆಯುಷ್ಮಾನ್ ಭಾರತ ಯೋಜನೆಯ ವೈಫಲ್ಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ವೈದ್ಯರು, ವೈದ್ಯಕೀಯ ಕ್ಷೇತ್ರದ ಪರಿಣತರು ಸಲಹೆ ನೀಡಿದ್ದಾರೆ. ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಕೂಡ ಪರಿಸರದ ಬಗ್ಗೆ ಸಲಹೆ ನೀಡಿದ್ದಾರೆ’ ಎಂದು ವಿವರಿಸಿದರು.

‘ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳಿಗೆ ಉದ್ಯೋಗ ಸೃಷ್ಟಿಯ ಬಗ್ಗೆ ಕೂಡ ವಿಸ್ತೃತ ಚರ್ಚೆ ನಡೆಸಲಾಗಿದೆ’ ಎಂದು ಅವರು ವಿವರಿಸಿದರು.

‘ಮಾನವ ಸಂಪನ್ಮೂಲಕ್ಕೆ ಹೆಚ್ಚಿನ ಆದ್ಯತೆ ನೀಡಲು ರಾಹುಲ್ ಗಾಂಧಿ ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಯಾವತ್ತೂ ಜನಸಾಮಾನ್ಯರ ಜೊತೆ ನಿಂತಿದೆ. ಧ್ವನಿ ಇಲ್ಲದ ಜನರ ಪರವಾಗಿ ನಿಲ್ಲಬೇಕು ಎನ್ನುವುದು ಪಕ್ಷದ ಉದ್ದೇಶ’ ಎಂದರು.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !