ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಬೇಡಿಕೆ ಈಡೇರಿಕೆಗೆ ಕಾರ್ಮಿಕರ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಸತಿ ನಿಲಯ ಕಾರ್ಮಿಕರ ಸಂಘಟನೆ ವತಿಯಿಂದ ನಗರದ ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಗುರುವಾರ ಧರಣಿ ಆರಂಭಿಸಲಾಯಿತು.

ವಸತಿ ನಿಲಯ ಕಾರ್ಮಿಕರ ವೇತನದಲ್ಲಿ ಕಡಿತ ಮಾಡಲಾದ ಸಮಗ್ರ ಪಿಎಫ್ ಹಣದ ಮಾಹಿತಿ ನೀಡಬೇಕು. ಇಎಸ್ಐ ಸೌಲಭ್ಯ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಬಾಕಿ ವೇತನ ಪಾವತಿಸಬೇಕು. ಅನಾವಶ್ಯಕವಾಗಿ ಕಾರ್ಮಿಕರಿಗೆ ನೀಡುವ ಕಿರುಕುಳ ನಿಲ್ಲಿಸಬೇಕು.

ಪ್ರತಿ ವರ್ಷದಂತೆ ಕನಿಷ್ಠ ವೇತನವನ್ನು ನೀಡಬೇಕು. ಅಲ್ಪಸಂಖ್ಯಾತರು, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ವೇತನದ ವ್ಯತ್ಯಾಸವನ್ನು ಸರಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಎಐಯುಟಿಯುಸಿ ಜಿಲ್ಲಾ ಸಹ ಸಂಚಾಲಕ ಸುನೀಲ ಸಿದ್ರಾಮಶೆಟ್ಟಿ, ಕಾರ್ಯದರ್ಶಿ ಮಹಾದೇವಿ ಧರ್ಮಶೆಟ್ಟಿ ಮಾತನಾಡಿದರು. ಸುಲೋಚನಾ ತಿವಾರಿ, ರಜನಿ ಬಡಿಗೇರ, ಜಯಶ್ರೀ ಮೇತ್ರಿ, ಸವಿತಾ ಬಿಸಿನಾಳ, ಭೀಮಬಾಯಿ ಅಸ್ಕಿ, ರಾಮು ರಾಠೋಡ, ಸುಧಾಕರ ಕಾಮನಕೇರಿ ಧರಣಿಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು