ನಿವೃತ್ತ ನ್ಯಾ.ಹೆಗ್ಡೆ ಸಮಿತಿಯಿಂದ ಕೆರೆ ಪರಿಶೀಲನೆ

7

ನಿವೃತ್ತ ನ್ಯಾ.ಹೆಗ್ಡೆ ಸಮಿತಿಯಿಂದ ಕೆರೆ ಪರಿಶೀಲನೆ

Published:
Updated:
Prajavani

ಬೆಂಗಳೂರು: ಕೆರೆಗಳನ್ನು ಅಭಿವೃದ್ಧಿಪಡಿಸುವಾಗ ರಾಷ್ಟ್ರೀಯ ಹಸಿರು ಮಂಡಳಿಯ ನಿರ್ದೇಶನ ಪಾಲಿಸಲಾಗುತ್ತಿದೆಯೋ ಇಲ್ಲವೋ ಎಂಬುವುದನ್ನು ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ನೇತೃತ್ವದ ಸಮಿತಿ ಪರಿಶೀಲನೆ ನಡೆಸಲಿದೆ. 

ಈ ಸಮಿತಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಸಭೆ ನಡೆಸಿತು. ಬೆಳ್ಳಂದೂರು, ವರ್ತೂರು ಹಾಗೂ ಅಗರ ಕೆರೆಗಳ ಅಭಿವೃದ್ಧಿಗೆ ಕ್ರಿಯಾ
ಯೋಜನೆ ರೂಪಿಸುವ ಕುರಿತು ಸಭೆಯಲ್ಲಿ ಹೆಗ್ಡೆ ಅವರು ಪಾಲಿಕೆ ಆಯುಕ್ತ ಮಂಜುನಾಥ್‌ ಪ್ರಸಾದ್ ಹಾಗೂ ಐಐಎಸ್‌ಸಿ ವಿಜ್ಞಾನಿ ಟಿ.ವಿ.ರಾಮಚಂದ್ರ ಅವರ ಜತೆ ಚರ್ಚೆ ನಡೆಸಿದರು. ವಿವಿಧ ನಾಗರಿಕ ಸಂಘಟನೆಗಳ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

‘ಜನವರಿ 30ರಂದು ಮತ್ತೊಂದು ಸಭೆ ಕರೆದು ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದ ಕ್ರಿಯಾ ಯೋಜನೆಯನ್ನು ಅಂತಿಮಗೊಳಿಸಲಾಗುತ್ತದೆ. ನಂತರ ಸ್ಥಳ ಪರಿಶೀಲನೆ ನಡೆಸಲಾಗುವುದು’ ಎಂದು ಹೆಗ್ಡೆ ತಿಳಿಸಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !